ಕರ್ನಾಟಕ

ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚುವ ಯತ್ನ : ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಕಳವಳ

Pinterest LinkedIn Tumblr

santhosh-hegde_byte

ದಾವಣಗೆರೆ, ನ.29: ಭ್ರಷ್ಟಾಚಾರ ವ್ಯವಸ್ಥೆಗೆ ಕಡಿವಾಣ ಹಾಕುವ ಕರ್ನಾಟಕ ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚುವ ಯತ್ನ ನಡೆದಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಹೇಳಿದರು.

ಮಹಾನಗರ ಪಾಲಿಕೆ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಆಯೋಜಿಸಲಾಗಿದ್ದ ಭುವನೇಶ್ವರಿ ದೇವಿ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಅವರು, ಈ ಸಂಸ್ಥೆಯನ್ನು ಮುಚ್ಚುವ ಯತ್ನ ನಡೆಸಿದೆ. ಇದಕ್ಕೆ ಅವಕಾಶ ಕೊಡಬೇಡಿ ಎಂದು ಹೋರಾಟ ಮಾಡಿಯಾದ್ರೂ ಉಳಿಸಿಕೊಳ್ಳಿ ಎಂದು ಹೇಳಿದರು. ಈಗಾಗಲೇ ಲೋಕಾಯುಕ್ತ ಸಂಸ್ಥೆ ಮುಚ್ಚುವ ಕರಡು ಪ್ರತಿ ಸಿದ್ಧಗೊಂಡಿದೆ. ಅದು ಕೆಲ ದಿನಗಳಲ್ಲೇ ವಿಧಾನಮಂಡಲದಲ್ಲಿ ಚರ್ಚೆಗೆ ಬರಲಿದೆ ಎದು ಹೇಳಿದರು.

ಐದು ವರ್ಷಗಳ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಹುದ್ದೆ ನನಗೆ ಜೀವನದ ನೈಜತೆ ಕಲಿಸಿದೆ. ಕೆಳವರ್ಗದ ಜನರ ಕಷ್ಟ-ನೋವುಗಳಿಗೆ ಸ್ಪಂದಿಸುವ ಅವಕಾಶ ಕಲ್ಪಿಸಿತ್ತು. ಸಂವಿಧಾನಾತ್ಮಕವಾಗಿ ಸ್ಥಾಪನೆಗೊಂಡ ಸರ್ಕಾರವೇ ಜನರಿಗೆ ಅನ್ಯಾಯವೆಸಗುವುದನ್ನು ಕಂಡಿದ್ದೇನೆ ಎಂದರು.

ರಾಜ್ಯದಲ್ಲಿ ಅನ್ಯಾಯದ ವಿರುದ್ಧ ಹೋರಾಟ ಮಾಡಲು ಇರುವ ಪ್ರಮುಖ ಅಸ್ತ್ರವೊಂದು ಕೈ ತಪ್ಪಲಿದೆ. ಇದರ ಜನಪರ ನಾಯಕ ಶಕ್ತಿಯನ್ನು ತೆಗೆದು ಹಾಕಲು ಸರ್ಕಾರ ಮುಂದಾಗಿದೆ. ಭ್ರಷ್ಟಾಚಾರ ತಡೆಯಲು ಹೊಸ ಸಂಸ್ಥೆಯನ್ನು ಕಟ್ಟುತ್ತಿದ್ದಾರೆ. ಇದಕ್ಕೆ ಅವಕಾಶ ನೀಡದೆ ಪ್ರಸ್ತುತ ಲೋಕಾಯುಕ್ತವನ್ನು ಉಳಿಸಿಕೊಳ್ಳುವ ಜವಾಬ್ದಾರಿ ಜನರ ಮೇಲಿದೆ ಎಂದರು. ಇಂದು ಸಮಾಜ ಶ್ರೀಮಂತಿಕೆ ಮತ್ತು ಅಧಿಕಾರವನ್ನು ಪೂಜಿಸುತ್ತಿದೆ. ಪ್ರಾಮಾಣಿಕತೆ ಮತ್ತು ಮಾನವೀಯತೆ ಇಲ್ಲವಾಗಿದೆ. ಇದರಿಂದಾಗಿ ಸಮಾಜ ಅಧೋಗತಿಗೆ ಕುಸಿಯುತ್ತಿದೆ ಎಂದು ಹೆಗಡೆ ಆತಂಕ ವ್ಯಕ್ತಪಡಿಸಿದರು.

Write A Comment