ಬೆಂಗಳೂರು: ಬೈಕ್ ಮತ್ತು ಸರಕು ಸಾಗಣೆ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಿಂದಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ರಾಮನಗರ ಜಿಲ್ಲೆಯ ಹುಚ್ಚೇಗೌಡನ ಪಾಳ್ಯ ಮುಖ್ಯರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ವೇಗವಾಗಿ ಬಂದ ಲಾರಿ ಬೈಕ್ಗೆ ಡಿಕ್ಕಿ ಹೊಡೆದಿದೆ. ಕೂಡಲೇ ನೆಲಕ್ಕುರುಳಿದ ಸಾವಾರರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದ ವಿಚಾರ ತಿಳಿಯುತ್ತಿದ್ದಂತೆಯೇ ಸಮೀಪದಲ್ಲೇ ಇದ್ದ ಜನರು ಘಟನಾ ಸ್ಥಾಳಕ್ಕೆ ಧಾವಿಸುತ್ತಿದ್ದಂತೆಯೇ ಭಯಬೀತನಾದ ಲಾರಿ ಚಾಲಕ ಲಾರಿಯನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ.
ಪ್ರಕರಣ ದಾಖಲಿಸಿಕೊಂಡಿರುವ ಮಾಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾರಿಯ ನೋಂದಾವಣಿ ಸಂಖ್ಯೆಯನ್ನು ನಮೂದಿಸಿಕೊಳ್ಳಲಾಗಿದ್ದು, ಲಾರಿ ಮಾಲೀಕರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಅಪಘಾತಕ್ಕೀಡಾಗಿ ಸಾವನ್ನಪ್ಪಿದ ಬೈಕ್ ಸವಾರರ ಕುರಿತು ಇನ್ನಷ್ಟೇ ಮಾಹಿತಿ ಹೊರ ಬೀಳಬೇಕಿದೆ.