ಕರ್ನಾಟಕ

ಪಾದಚಾರಿಗಳ ಮೇಲೆ ಹರಿದ ನೀರಿನ ಟ್ಯಾಂಕರ್: ಇಬ್ಬರು ಸಾವು

Pinterest LinkedIn Tumblr

Water tank lorry

ಬೆಂಗಳೂರು: ನಗರದ ಹೆಬ್ಬಾಳ ಜಂಕ್ಷನ್ ಬಳಿ ನೀರಿನ ಟ್ಯಾಂಕರ್ವೊಂದು ಸಿಗ್ನಲ್ನಲ್ಲಿ ನಿಂತಿದ್ದ ಬೈಕ್ ಡಿಕ್ಕಿ ಹೊಡೆದು ರಸ್ತೆ ದಾಟುದಿದ್ದ ಪಾದಚಾರಿಗಳ ಮೇಲೆ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವೇಗವಾಗಿ ಬರುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿಗಳ ಮೇಲೆ ಹರಿದಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಬೈಕ್ ಸವಾರ ಆನಂದ್(25) ಹಾಗೂ ವಿದ್ಯಾರ್ಥಿನಿ(19) ಟ್ಯಾಂಕರ್ನ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರಿಗೆ ಗಾಯಗಳಾಗಿವೆ.

ಪಾದಚಾರಿಗಳಿಗೆ ಡಿಕ್ಕಿ ಹೊಡೆದ ನಂತರ ಟ್ಯಾಂಕರ್ ಚಾಲಕ ಲಾರಿಯನ್ನು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಸ್ಥಳದಲ್ಲೇ ಇದ್ದ ಸಂಚಾರಿ ಪೊಲೀಸ್ ಪೇದೆ ಕೂಡಲೇ ದ್ವಿಚಕ್ರ ವಾಹನದಲ್ಲಿ ಹೋಗಿ ಚಾಲಕನನ್ನು ಬಂಧಿಸಿದ್ದಾರೆ. ಬಂಧಿತ ಚಾಲಕನನ್ನು ಯತೀಶ್ ಎಂದು ತಿಳಿದುಬಂದಿದೆ.

Write A Comment