ಬೆಂಗಳೂರು: ಕಳೆದ ಮೂರು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾದ ದಂಪತಿಗಳ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಭಾನುವಾರ ನಡೆದಿದೆ.
ಬೆಂಗಳೂರಿನ ಕಾಡುಗೋಡಿಯ ಪಟೇಲಮ್ಮ ಲೇಔಟ್ ನಲ್ಲಿ ವಾಸವಾಗಿದ್ದ ದಂಪತಿ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಕಾಡುಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.
ಮೃತರನ್ನು 27 ವರ್ಷದ ಹರೀಶ್, 22 ವರ್ಷದ ಅನಿತಾ ಎಂದು ಗುರುತಿಸಲಾಗಿದೆ. ಕಳೆದ 15 ದಿನಗಳ ಹಿಂದೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಮೃತರ ಬಗ್ಗೆ ಹೆಚ್ಚಿನ ಮಾಹಿತಿ ಇನ್ನೂ ತಿಳಿದು ಬಂದಿಲ್ಲ.