ಬೆಂಗಳೂರು: ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಖುಲಾಸೆಗೊಂಡಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸರ್ಕಾರವು ಮೇಲ್ಮನವಿ ಸಲ್ಲಿಸ ಬೇಕೇ ಬೇಡವೆ ಎಂಬ ಬಗ್ಗೆ ಇಂದು ಚರ್ಚೆಯಾಗಲಿದ್ದು, ಅಂತಿಮವಾಗಿ ನಿರ್ಧರಿತವಾಗಲಿದೆ.
ಹೌದು, ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ರಾಜ್ಯ ಸಂಪುಟ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿದು ಬಂದಿದೆ.
ಈ ನಡವೆ ರಾಜ್ಯದ ಪ್ರದೇಶ ಕಾಂಗ್ರೆಸ್ ಸಮಿತಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದು, ಸರ್ಕಾರಕ್ಕೆ ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವುದು ಇಷ್ಟವಿಲ್ಲ. ಅಲ್ಲದೆ ಮೇಲ್ಮನವಿ ಸಲ್ಲಿಸುವುದು ಬೇಡ ಎಂದು ಮನವಿ ಮಾಡಿದೆ ಎಂದು ತಿಳಿದು ಬಂದಿದೆ. ಆದರೂ ಸಿಎಂ ಸಿದ್ದರಾಮಯ್ಯ ಅವರು ಇಂದು ತಮ್ಮ ಸಂಪುಟ ಸದಸ್ಯರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಪ್ರಕಟಿಸಲಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಯಲಲಿತಾ ಅವರನ್ನು ರಾಜ್ಯ ಹೈಕೋರ್ಟ್ ಕಳೆದ ಮೇ 11ರಂದು ಖುಲಾಸೆಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಕೆಲ ಮಂದಿ ಒತ್ತಡ ಹೇರಿದ್ದರು.