ತುಮಕೂರು, ಜೂ, 28: ಇಬ್ಬರು ವ್ಯಕ್ತಿಗಳು ಒಂದು ವರ್ಷದಿಂದ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರವೆಸಗಿ ಬಾಲಕಿಯನ್ನು 8 ತಿಂಗಳ ಗರ್ಭಿಣಿಯನ್ನಾಗಿಸಿದ ಘಟನೆ ಪಾವಗಡ ತಾಲೂಕಿನ ಚಿತ್ತಗಾನ ಹಳ್ಳಿಯಲ್ಲಿ ನಡೆದಿದೆ.
ಗ್ರಾಮದ ಶಾಲೆಯೊಂದರಲ್ಲಿ 8ನೇ ತರಗತಿ ಓದುತ್ತಿದ್ದ ಬಾಲಕಿಯ ಹೊಟ್ಟೆ ಉಬ್ಬಿಕೊಂಡಿದ್ದರಿಂದ ಅನುಮಾನಗೊಂಡ ಪೋಷಕರು, ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಸ್ಕ್ಯಾನ್ ಮಾಡಿಸಿದಾಗ ಬಾಲಕಿ 8 ತಿಂಗಳ ಗರ್ಭಿಣಿ ಎಂಬ ಸಂಗತಿ ಬೆಳಕಿಗೆ ಬಂದಿದೆ.
ಪೋಷಕರು ಬಾಲಕಿಯನ್ನು ವಿಚಾರಿಸಿದಾಗ, ಗ್ರಾಮದ ಹೊರವಲಯದಲ್ಲಿ ಬಹಿರ್ದೆಸೆಗೆ ಹೋದಾಗ ಇದೇ ಗ್ರಾಮದ ತಿಪ್ಪೇಸ್ವಾಮಿ (60) ಎಂಬಾತ ಅತ್ಯಾಚಾರ ಎಸಗಿದ್ದ. ಈ ಘಟನೆಯನ್ನು ಇದೇ ಗ್ರಾಮದ ಮಲ್ಲಪ್ಪ (35) ನೋಡಿದ್ದ. ಅದಿನಿಂದ ಮಲ್ಲಪ್ಪ ದಿನಾಲೂ ತನ್ನೊಂದಿಗೆ ಲೈಂಗಿಕ ಕ್ರಿಯೆಗೆ ಸಹಕರಿಸು, ಇಲ್ಲದಿದ್ರೆ, ಶಾಲೆಯವರಿಗೆ, ಊರಿನವರಿಗೆ ವಿಚಾರ ತಿಳಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ.
ಅಲ್ಲದೆ ನಿರಂತರವಾಗಿ ಒಂದು ವರ್ಷದಿಂದ ಅತ್ಯಾಚಾರ ಎಸಗುತ್ತಾ ಬಂದಿದ್ದಾನೆ ಎಂದು ತಿಳಿದು ಬಂದಿದೆ. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈಗ ಇಬ್ಬರೂ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ