ಕರ್ನಾಟಕ

ಲೋಕಾಯುಕ್ತರ ರಾಜೀನಾಮೆಗೆ ಒತ್ತಾಯ; ಕಚೇರಿ ಮುಂದೆ ಭಾರೀ ಪ್ರತಿಭಟನೆ

Pinterest LinkedIn Tumblr

pro

ಬೆಂಗಳೂರು, ಜು.8: ಲೋಕಾಯುಕ್ತ ನ್ಯಾ.ಭಾಸ್ಕರರಾವ್ ರಾಜೀನಾಮೆಗೆ ಒತ್ತಾಯಿಸಿ ನಡೆಸಲಾಗುತ್ತಿರುವ ಪ್ರತಿಭಟನೆ ಬಿರುಸುಗೊಂಡಿದೆ. ಕರ್ನಾಟಕ ರಕ್ಷಣಾ ವೇದಿಕೆ, ವಕೀಲರ ಸಂಘ ಮತ್ತಿತರ ಸಂಘ-ಸಂಘಟನೆಗಳ ಪದಾಧಿಕಾರಿಗಳು ಭಾಸ್ಕರರಾವ್ ರಾಜೀನಾಮೆಗೆ ಆಗ್ರಹಿಸಿ ನಿರಂತರವಾಗಿ ಪ್ರತಿಭಟನೆ ನಡೆ ಸುತ್ತಲೇ ಬಂದಿದ್ದಾರೆ.

ಇಂದು ಬೆಳಗ್ಗೆ ಕರವೇ ಮಹಿಳಾ ಘಟಕದ ಪದಾಧಿಕಾರಿಗಳು ಲೋಕಾಯುಕ್ತ ಕಚೇರಿಗೆ ಮುತ್ತಿಗೆ ಹಾಕಿ ಭಾಸ್ಕರರಾವ್ ರಾಜೀನಾಮೆಗೆ ಆಗ್ರಹಿಸಿದರಲ್ಲದೆ, ಅವರ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು. ನಂತರ ವಕೀಲರ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ಎ.ಪಿ.ರಂಗನಾಥ್, ಜೆಡಿಎಸ್‌ನ ರಮೇಶ್ ಬಾಬು ನೇತೃತ್ವದಲ್ಲಿ ಲೋಕಾಯುಕ್ತ ಕಚೇರಿ ಮುಂದೆ ವಕೀಲರು ಮತ್ತಿತರರು ಬೃಹತ್ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ನಂತರ ರಾಜಭವನದವರೆಗೆ ರ್ಯಾ ಲಿ ಮೂಲಕ ತೆರಳಿ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಹಾಗೂ ವಕೀಲರ ನಡುವೆ ಮಾತಿನ ಚಕಮಕಿ ನಡೆಯಿತು. ಅಲ್ಲದೆ ತಳ್ಳಾಟ-ನೂಕಾಟ ಸಹ ನಡೆಯಿತು. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ವಕೀಲರನ್ನು ವಶಕ್ಕೆ ಪಡೆದರು. ಇನ್ನಿತರ ಸಂಘ ಸಂಸ್ಥೆಗಳ ಪದಾಧಿಕಾರಿಗಳೂ ಕೂಡ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಕಾವು ದಿನೇ ದಿನೇ ತೀವ್ರಗೊಳ್ಳುತ್ತಿದೆ. ಅಧಿವೇಶನದಲ್ಲಿ ಸಹ ಲೋಕಾ ಪ್ರಕರಣ ಪ್ರಸ್ತಾಪವಾಗಿ ಅಲ್ಲಿ ಮಾತಿನ ಚಕಮಕಿ ನಡೆದರೂ ಭಾಸ್ಕರರಾವ್ ಮಾತ್ರ ಇದಕ್ಕೂ ತಮಗೂ ಸಂಬಂಧವೇ ಇಲ್ಲವೇನೋ ಎಂಬಂತೆ ಕಚೇರಿಗೆ ಬಂದು ಕೂರುತ್ತಿದ್ದಾರೆ. ಇದು ಸಂಘ-ಸಂಸ್ಥೆಗಳನ್ನು ಇನ್ನಷ್ಟು ಕೆರಳಿಸಿದೆ. ಹಾಗಾಗಿ ಹೋರಾಟಗಳು ಮತ್ತಷ್ಟು ತೀವ್ರಗೊಂಡು ಅದ್ಯಾವ ಹಂತಕ್ಕೆ ಮುಟ್ಟಲಿದೆಯೋ ತಿಳಿಯದಾಗಿದೆ.

Write A Comment