ಕರ್ನಾಟಕ

ಕಲಬುರ್ಗಿ ಹತ್ಯೆ ಖಂಡಿಸಿ ….ಆದರೆ ಪ್ರಶಸ್ತಿ ವಾಪಸ್ ಮಾಡುವುದು ಸರಿಯಲ್ಲ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

Pinterest LinkedIn Tumblr

Siddaramaiah

ಬೆಂಗಳೂರು,ಅ.14: ಹಿರಿಯ ಸಾಹಿತಿ ಡಾ.ಎಂ.ಎಂ.ಕಲಬುರ್ಗಿ ಹತ್ಯೆ ಖಂಡಿಸಿ ಸಾಹಿತಿಗಳು ಪ್ರತಿಭಟಿಸುವುದರಲ್ಲಿ ತಪ್ಪಿಲ್ಲ. ಆದರೆ ಜೀವಮಾನ ಸಾಧನೆ ಆಧರಿಸಿ ನೀಡಿರುವ ಪ್ರಶಸ್ತಿಗಳನ್ನು ವಾಪಸ್ ಮಾಡುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದಲ್ಲಿಂದು ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಗೆ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, ಸಾಹಿತಿಗಳಿಗೆ ನೀಡಿದ ಪ್ರಶಸ್ತಿಗಳನ್ನು ವಾಪಸ್ ಮಾಡಬಾರದೆಂದು ಮನವಿ ಮಾಡಿದರು.

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಮಂಡ್ಯ ಜಿಲ್ಲೆಯಲ್ಲಿ ಮೃತಪಟ್ಟ ರೈತರ ಕುಟುಂಬಕ್ಕೆ ಸಾಂತ್ವನ ಹೇಳುವ ಕಾರ್ಯಕ್ರಮದಲ್ಲಿ ನೀಡಲಾದ ಚೆಕ್ ವಿತರಣೆಯಲ್ಲಿ ಯಾವುದೇ ಗೊಂದಲ ಇಲ್ಲ ಎಂದರು.

ವಿವಾದಿತ ಕಳಸ-ಬಂಡೂರಿ ಯೋಜನೆ ಅನುಷ್ಠಾನದ ವಿಚಾರದಲ್ಲಿ ಮತ್ತೊಮ್ಮೆ ಸರ್ವ ಪಕ್ಷ ಸಭೆಯಲ್ಲಿ ಅಭಿಪ್ರಾಯ ಸಂಗ್ರಹಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಕಳೆದ ಎರಡು ತಿಂಗಳಿನಿಂದ ರಾಜ್ಯ ದಲ್ಲಿ ಭೀಕರ ಬರಗಾಲ ಆವರಿಸಿದ್ದು, ಜನ ಜಾನುವಾರು ಗಳು ತತ್ತರಿಸಿದ್ದವು. ಇದುವರೆಗೂ ಯಾವುದೇ ಪರಿಹಾರ ಕೇಂದ್ರದಿಂದ ಬಂದಿಲ್ಲ. ಬರಪೀಡಿತ ಪ್ರದೇಶ ಗಳಿಗೆ ಸಂಬಂಧಿಸಿದಂತೆ ನೆರವು ನೀಡುವಂತೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಮನವಿ ಹಿನ್ನೆಲೆಯಲ್ಲಿ ಸೆಪ್ಟಂಬರ್‌ನಲ್ಲಿ ಕೇಂದ್ರದಿಂದ ಬರ ಅಧ್ಯಯನ ನಡೆಸಿದ್ದು, ವರದಿಯನ್ನು ಕೂಡ ಈಗಾಗಲೇ ಸಲ್ಲಿಸಿದೆ ಆದರೂ, ಕೇಂದ್ರದಿಂದ ರಾಜ್ಯಕ್ಕೆ ಯಾವುದೇ ಪರಿಹಾರ ಬಂದಿಲ್ಲ ಎಂದರು.

ಗುರಿಯತ್ತ ತೆರಿಗೆ ಸಂಗ್ರಹ ಪ್ರಸಕ್ತ ಆರ್ಥಿಕ ಸಾಲಿನಲ್ಲೇ ಸಂಗ್ರಹಿಸಲು ನಿಗದಿಪಡಿಸಲಾಗಿದ್ದ ಗುರಿಗೆ ತಕ್ಕಂತೆ ರಾಜ್ಯದಲ್ಲಿ ತೆರಿಗೆ ಸಂಗ್ರಹವಾಗುತ್ತಿದೆ.ಇದುವರೆಗಿನ ತೆರಿಗೆ ಸಂಗ್ರಹ ತೃಪ್ತಿಕರವಾಗಿದೆ. ರಾಜ್ಯ ಸರ್ಕಾರ ರೂಪಿಸಿರುವ ಯೋಜನೆಗಳ ಅನುಷ್ಠಾನದಲ್ಲಿ ಇಲಾಖಾವಾರು ಸಾಧಿಸಿರುವ ಪ್ರಗತಿ ಪರಿಶೀಲಿಸಲಾಗುತ್ತಿದೆ. ವಾಣಿಜ್ಯ ತೆರಿಗೆ, ಅಬಕಾರಿ, ನೋಂದಣಿ ಮತ್ತು ಮುಂದ್ರಾಂಕ, ಸಾರಿಗೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಗಳ ಪ್ರಗತಿ ಪರಿಶೀಲಿಸಲಾಗುತ್ತಿದೆ.

Write A Comment