ಕರ್ನಾಟಕ

ಕನ್ನಡ ರಾಜ್ಯೋತ್ಸವ ದಿನದಂದು ರಾಜಭವನದಲ್ಲಿ ಗುಜರಾತಿ ಉತ್ಸವ ಆಚರಣೆ; ಪ್ರತಿಭಟನೆ

Pinterest LinkedIn Tumblr

karave

ಬೆಂಗಳೂರು: ಕನ್ನಡ ರಾಜ್ಯೋತ್ಸವ ದಿನದಂದು ರಾಜಭವನದಲ್ಲಿ ಗುಜರಾತಿ ಉತ್ಸವ ಆಚರಿಸಲಾಗುತ್ತಿದೆ ಎಂದು ಆರೋಪಿಸಿ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಭಾನುವಾರ ರಾಜಭವನದ ಬಳಿ ಪ್ರತಿಭಟನೆ ನಡೆಸಿದರು.

ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ರಾಜಭವನದ ಎದುರು ಜಮಾಯಿಸಿದ ಕಾರ್ಯಕರ್ತರು, ರಾಜ್ಯಪಾಲ ವಜುಭಾಯಿ ವಾಲಾ ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು. ನಂತರ ರಾಜಭವನ ಪ್ರವೇಶಿಸಲು ಮುಂದಾದ ಕಾರ್ಯಕರ್ತರನ್ನು ತಡೆದ ಕಬ್ಬನ್‌ ಪಾರ್ಕ್‌ ಪೊಲೀಸರು, ಪ್ರವೀಣ್ ಕುಮಾರ್ ಶೆಟ್ಟಿ ಸೇರಿದಂತೆ, ಏಳು ಮಂದಿಯನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.

ಕನ್ನಡಕ್ಕೆ ಅವಮಾನ: ‘ರಾಜ್ಯೋತ್ಸವ ದಿನದಂದು ರಾಜ್ಯಪಾಲರು ನಗರದಲ್ಲಿರುವ ಗುಜರಾತಿಗಳನ್ನು ರಾಜಭವನಕ್ಕೆ ಕರೆಯಿಸಿಕೊಂಡು ಗುಜರಾತಿ ಉತ್ಸವ ಆಚರಿಸುವ ಮೂಲಕ ಕನ್ನಡಕ್ಕೆ ಅವಮಾನ ಮಾಡಿದ್ದಾರೆ. ಕೇಂದ್ರ ಸರ್ಕಾರ ಕೂಡಲೇ ಅವರನ್ನು ವಾಪಸ್ ಕರೆಯಿಸಿಕೊಂಡು, ಬೇರೆ ರಾಜ್ಯಪಾಲರನ್ನು ನೇಮಿಸಬೇಕು’ ಎಂದು ಪ್ರವೀಣ್ ಕುಮಾರ್ ಶೆಟ್ಟಿ ಆಗ್ರಹಿಸಿದರು.

Write A Comment