ಕರ್ನಾಟಕ

ಕುಡಿದು ವಾಹನ ಚಲಾಯಿಸಿದರೆ ವಿರುದ್ಧ ಕ್ರಮ ತೆಗೆದುಕೊಳ್ಳಿ : ಡಾ.ಜಿ.ಪರಮೇಶ್ವರ್

Pinterest LinkedIn Tumblr

PARAMUಬೆಂಗಳೂರು,  ಡಿ.11- ನಗರದಲ್ಲಿ ಸಂಚಾರಿ ದಟ್ಟಣೆ ನಿಯಂತ್ರಣ ಮಾಡುವ ಜೊತೆಗೆ ಕುಡಿದು ಚಾಲನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರದ ಸಂಚಾರ ನಿರ್ವಾಹಣಾ ಕೇಂದ್ರದಲ್ಲಿ  ಸಭೆ ನಡೆಸಿದ ನಂತರ ಮಾತನಾಡಿದ ಅವರು, ಬೆಂಗಳೂರು ನಗರಕ್ಕೆ ಪ್ರತಿವರ್ಷ 5 ಲಕ್ಷ ವಾಹನಗಳು ಸೇರ್ಪಡೆಯಾಗುತ್ತಿವೆ. ಈವರೆಗೆ 58.5 ಲಕ್ಷ ವಾಹನಗಳು ನಗರದಲ್ಲಿ ಸಂಚರಿಸುತ್ತಿವೆ. ಹೀಗಾಗಿ, ವಾಹನ ದಟ್ಟಣೆ ಹೆಚ್ಚಾಗಿದೆ ಎಂದು ಹೇಳಿದರು. ಬೆಳಗ್ಗೆ ಮತ್ತು ಸಂಜೆ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ಅಧಿಕಾರಿಗಳು ಖುದ್ದಾಗಿ ನಿಂತು ಈ ದಟ್ಟಣೆಯನ್ನು ನಿಯಂತ್ರಿಸಿ ನಾಗರೀಕರಿಗೆ ತೊಂದರೆ ಯಾಗದಂತೆ ಎಚ್ಚರ ವಹಿಸಬೇಕು.

ಕುಡಿದು ವಾಹನ ಚಲಾಯಿಸುವವರ ವಿರುದ್ಧ ಯಾವುದೇ ಒತ್ತಡಕ್ಕೆ ಒಳಗಾಗದೆ ಕಠಿಣ ಕ್ರಮ ಕೈಗೊಂಡು ವಾಹನ ಪರವಾನಗಿ ರದ್ದು ಮಾಡಬೇಕು ಎಂದರು. ಸಂಚಾರಿ ನಿಯಮಗಳ ಬಗ್ಗೆ ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಮೂಡಿಸಲು ಹಿರಿಯ ಅಧಿಕಾರಿಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಲಹೆ ನೀಡಿದರು. ಈ ವೇಳೆ ಡಿಜಿ ಓಂಪ್ರಕಾಶ್, ಹೆಚ್ಚುವರಿ ಪೊಲೀಸ್ ಆಯುಕ್ತ ಸಲೀಂ ಮೊದಲಾದವರು ಇದ್ದರು.

Write A Comment