ಕರ್ನಾಟಕ

ಲೋಕಾ ಲಂಚ ಪ್ರಕರಣ: ಎಸ್‌ಐಟಿಯಿಂದ 5ನೇ ಚಾರ್ಜ್‌ಶೀಟ್ ಸಲ್ಲಿಕೆ

Pinterest LinkedIn Tumblr

loka-19

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ಬುಧವಾರ 5ನೇ ಚಾರ್ಜ್‌ಶೀಟ್ ಸಲ್ಲಿಸಿದೆ.

ಲೋಕಾಯುಕ್ತ ಲಂಚ ಪ್ರಕರಣ ಸಂಬಂಧ ಶ್ರೀನಿವಾಸ್ ಎಂಬುವವರು ನೀಡಿದ್ದ ದೂರಿನ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಎಸ್‌ಐಟಿ ಇಂದು 1250 ಪುಟಗಳ ಚಾರ್ಜ್‌ಶೀಟ್ ಅನ್ನು ಲೋಕಾಯುಕ್ತ ವಿಶೇಷ ಕೋರ್ಟ್‌ಗೆ ಸಲ್ಲಿಸಿದೆ.

ಮಾಜಿ ಲೋಕಾಯುಕ್ತ ನಾ.ವೈ.ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್, ಹೊಟ್ಟೆ ಕೃಷ್ಣ ಹಾಗೂ ನರಸಿಂಹಮೂರ್ತಿ ವಿರುದ್ಧದ ಆರೋಪದ ಬಗ್ಗೆ ಚಾರ್ಜ್‌ಶೀಟ್‌ನಲ್ಲಿ 137 ಸಾಕ್ಷಿಗಳ ಹೇಳಿಕೆಯನ್ನು ಉಲ್ಲೇಖಿಸಲಾಗಿದೆ.

Write A Comment