ಕರ್ನಾಟಕ

ಗ್ರಾಮಗಳನ್ನು ದತ್ತು ಪಡೆಯಲು ವಿವಿಗಳಿಗೆ ರಾಷ್ಟ್ರಪತಿ ಕರೆ

Pinterest LinkedIn Tumblr

pranvaಕಲಬುರಗಿ, ಡಿ.22- ದೇಶದ ಎಲ್ಲ ಕೇಂದ್ರೀಯ ವಿಶ್ವವಿದ್ಯಾನಿಲಯಗಳು  ತಲಾ ಐದು ಗ್ರಾಮಗಳನ್ನು ದತ್ತು ಪಡೆದು ಗ್ರಾಮೀಣಾಭಿವೃದ್ಧಿಗೆ ಮುಂದಾಗಬೇಕು ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇಂದಿಲ್ಲಿ ಕರೆ ನೀಡಿದರು.

ಗುಲ್ಬರ್ಗ ಕೇಂದ್ರೀಯ ವಿಶ್ವವಿದ್ಯಾನಿಲಯದಲ್ಲಿ ಏರ್ಪಡಿಸಿದ್ದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪದವಿ ಪ್ರದಾನ ಮಾಡಿ ಮಾತನಾಡಿದ ಅವರು, ವಿವಿಗಳು ಗ್ರಾಮೀಣ ಅಭಿವೃದ್ಧಿಗೆ ಕೈ ಜೋಡಿಸುವ ಅಗತ್ಯವಿದೆ ಎಂದು  ಪ್ರತಿಪಾದಿಸಿದರು.  ಎಲ್ಲ ಕೇಂದ್ರೀಯ ವಿದ್ಯಾಲಯಗಳು ಗ್ರಾಮಗಳನ್ನು ದತ್ತು ಪಡೆದು ಮಾದರಿ ಗ್ರಾಮಗಳನ್ನಾಗಿ ರೂಪಿಸುವ ಮೂಲಕ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಪ್ರಣಬ್ ಮುಖರ್ಜಿ ಅವರು ಹೇಳಿದರು.

ಪದವಿ ಪ್ರದಾನ
ಕಲ್ಬುರ್ಗಿ,ಡಿ.22- ವಿವಿಧ ವಿಭಾಗಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಇಂದಿಲ್ಲಿ ಪದವಿ ಪ್ರದಾನ ಮಾಡಿದರು.  ಜಿಲ್ಲೆಯ ಆಳಂದ ತಲ್ಲೂಕಿನ ಗಡಂಚಿಯಲ್ಲಿರುವ ಕೇಂದ್ರೀಯ ವಿವಿ ಎಸ್.ಐ ಆಡಿಟೋರಿಯಂನಲ್ಲಿ ಏರ್ಪಡಿಸಿದ್ದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡಿದ್ದರು.  ಮಧ್ಯಾಹ್ನ 11.50ಕ್ಕೆ ವಿಶೇಷ ಹೆಲಿಕ್ಯಾಪ್ಟರ್ ಮೂಲಕ ನಗರಕ್ಕೆ ಆಗಮಿಸಿದ ರಾಷ್ಟ್ರಪತಿಗಳನ್ನು ಗಣ್ಯರು, ವಿವಿ ಕುಲಪತಿಗಳು ಬರಮಾಡಿಕೊಂಡರು.  ರಾಷ್ಟ್ರಪತಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಸಚಿವ ಖಮರುಲ್ಲಾ ಇಸ್ಲಾಂ ಇನ್ನಿತರರು ಇದ್ದರು.  ರಾಷ್ಟ್ರಪತಿ ಆಗಮನದ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

Write A Comment