ಅನಂತಪುರ,ಡಿ.26: ರ ದರ್ಶನ ಮಾಡಿಕೊಂಡು ವಾಪಸ್ ಬರುತ್ತಿದ್ದ ವೇಳೆ ಸಂಖಪಲ್ಲಿ ಗ್ರಾಮದ ತಿರುವು ಬಳಿ ಲಾರಿಯೊಂದು ಮಾರುತಿ ಓಮ್ನಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ಜಿಲ್ಲೆಯ ಮುದಿಗುಪ್ಪ ತಾಲೂಕಿನ ಸಂಖಪಲ್ಲಿ ಕ್ರಾಸ್ ಬಳಿ ನಡೆದಿದೆ. ತ್ರೀನಾಥ್‌ರೆಡ್ಡಿ, ಭೀಮಸೇನ್‌ರಾವ್ ಅಳವಂಡಿಕರ್, ವಿಶ್ವಜಿತ್, ಭೀಮಸೇನಗೌಡ ಎಂಬುವವರೇ ಮೃತಪಟ್ಟ ದುರ್ದೈವಿಗಳು. ಮೃತರನ್ನು ಕೊಪ್ಪಳ ಜಿಲ್ಲೆಯ ಗಂಗಾವತಿ ಮೂಲದವರೆಂದು ಗುರುತಿಸಲಾಗಿದೆ ತಿಮ್ಮಪ್ಪನ ದರ್ಶನಕ್ಕಾಗಿ ಗಂಗಾವತಿಯ ಮೂಲದ 7 ಮಂದಿ ಸ್ನೇಹಿತರು ಕೂಡಿ ತಿರುಪತಿಗೆ ತೆರಳಿದ್ದರು.
ವಾಪಸ್ ಬರುವಾಗ ಈ ದುರ್ಘಟನೆ ಸಂಭಿವಿಸಿದೆ. ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದ ಮೂವರನ್ನು ಪೋಲಿಸರು ಸ್ಥಳೀಯರ ಸಹಾಯದಿಂದ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.
ಲಾರಿ ಚಾಲಕನ ಅತಿವೇಗ, ಅಜಾಗರೂಕತೆಯೇ ಈ ಘಟನೆಗೆ ಕಾರಣ ಎಂದು ಹೇಳಲಾಗಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರನ್ನು ಚಂದ್ರಶೇಖರ, ವೆಂಕಟೇಶ್, ಸತ್ಯನಾರಾಯಣ ಎಂದು ಗುರುತಿಸಲಾಗಿದೆ. ಈ ಬಗ್ಗೆ ಅನಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.