ಮೈಸೂರು: ನಗರದಲ್ಲಿ ಶನಿವಾರ ಹಾಡಹಗಲೆ ಎಟಿಎಂ ಸಿಬ್ಬಂದಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಕೆಲವೇ ಗಂಟೆಗಳಲ್ಲಿ ಆರೋಪಿಯನ್ನೂ ಬಂಧಿಸಲಾಗಿದೆ.
ಹೆಬ್ಬಾಳ ಮುಖ್ಯರಸ್ತೆಯಲ್ಲಿರುವ ಖಾಸಗಿ ಬ್ಯಾಂಕೊಂದರ ಎಟಿಎಂನಲ್ಲಿ ಭದ್ರತಾ ಕಾರ್ಯ ನಿರ್ವಹಿಸುತ್ತಿದ್ದ ಸದಾನಂದ (60) ಕೊಲೆಯಾದವರು. ಘಟನೆಗೆ ಸಂಬಂಧಿಸಿ ಲೋಕನಾಯಕ ನಗರ ನಿವಾಸಿ ರವಿ (22) ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೇಟಗಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ವಿಚಾರಣೆ ನಡೆಸುತ್ತಿದ್ದಾರೆ.