ಕರ್ನಾಟಕ

‘ಹಿಂಬದಿ ಸವಾರರಿಗೂ ಹೆಲ್ಮೆಟ್‌: ಇಂದಿನಿಂದಲೇ ಜಾರಿ’

Pinterest LinkedIn Tumblr

helment1webದಾವಣಗೆರೆ: ಮಂಗಳವಾರದಿಂದಲೇ ಅನ್ವಯವಾಗುವಂತೆ ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಹಿಂಬದಿ ಸವಾರರಿಗೂ ಹೆಲ್ಮೆಟ್‌ ಕಡ್ಡಾಯಗೊಳಿಸಿ ಆದೇಶಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದರು.

ಸುಪ್ರೀಂ ಕೋರ್ಟ್‌ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ಪ್ರಥಮ ಹಂತದಲ್ಲಿ ಬೆಂಗಳೂರಿನಲ್ಲಿ ಮಾತ್ರ ಕಡ್ಡಾಯಗೊಳಿಸಲಾಗಿದೆ. ಹಂತ ಹಂತವಾಗಿ ರಾಜ್ಯದ ಉಳಿದ ಕಡೆಯೂ ಹಿಂಬದಿ ಸವಾರರಿಗೆ ಹೆಲ್ಮೆಟ್‌ ಕಡ್ಡಾಯಗೊಳಿಸಲಾಗುವುದು ಎಂದು ಅವರು ಸೋಮವಾರ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

Write A Comment