ಕರ್ನಾಟಕ

ಒಂಟೆತ್ತಿನ ಗಾಡಿಯ ಮೇಲೆ ಹೆಲ್ಮೆಟ್ ಧರಿಸಿ ವಾಟಾಳ್ ಪ್ರತಿಭಟನೆ

Pinterest LinkedIn Tumblr

helmetಬೆಂಗಳೂರು, ಜ.12-ದ್ವಿಚಕ್ರ ವಾಹನ ಸವಾರರು ಹಾಗೂ ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿರುವ ಕ್ರಮ ವಿರೋಧಿಸಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಒಂಟೆತ್ತಿನ ಗಾಡಿಯ ಮೇಲೆ ಮೆರವಣಿಗೆ ಮಾಡುವ ಮೂಲಕ ಮೈಸೂರುಬ್ಯಾಂಕ್ ವೃತ್ತದಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಾಹನ ಸವಾರರಿಗೂ ಮತ್ತು ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿರುವ ಸರ್ಕಾರದ ಕ್ರಮ ಅವೈಜ್ಞಾನಿಕವಾಗಿದೆ. ಹೆಲ್ಮೆಟ್ ಹಾಕುವುದರಿಂದ ಅನುಕೂಲಕ್ಕಿಂತ ಅನಾನುಕೂಲಗಳೇ ಹೆಚ್ಚು ಎಂದು ಅವರು ಹೇಳಿದರು.

ಸರ್ಕಾರ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ ಹೆಲ್ಮೆಟ್ ಕಡ್ಡಾಯ ಗೊಳಿಸಿರುವ ಕ್ರಮವನ್ನು ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸಿದರು. ಏಕಾಏಕಿ ಈ ಕ್ರಮವನ್ನು ಜಾರಿಗೊಳಿಸಿರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ನಿರಂತರವಾಗಿ ಹೆಲ್ಮೆಟ್ ಹಾಕುವುದರಿಂದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದರು.

ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯಗೊಳಿಸಿರುವುದರಿಂದ ಸರಗಳ್ಳತನ ಸೇರಿದಂತೆ ಹಲವು ಅಪರಾಧ ಚಟುವಟಿಕೆಗಳಿಗೆ ಸಹಕಾರಿಯಾಗುತ್ತದೆ. ಈಗಾಗಲೇ ಸರಗಳವು ಪ್ರಕರಣಗಳು ಹೆಚ್ಚಾಗುತ್ತಿವೆ. ಹೆಲ್ಮೆಟ್ ಧರಿಸಿದ ಸವಾರರು ಸರಗಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಈಗ ಸರ್ಕಾರ ಕಾನೂನು ಮಾಡಿದರೆ ಅವರಿಗೆ ಮತ್ತಷ್ಟು ಅನುಕೂಲವಾಗುತ್ತದೆ ಎಂದು ವಾಟಾಳ್ ಹೇಳಿದರು.

Write A Comment