ಕರ್ನಾಟಕ

ಉಪ ಚುನಾವಣೆ ಅಭ್ಯರ್ಥಿ ಆಯ್ಕೆಯಲ್ಲಿ ನನ್ನ ಪಾತ್ರವಿಲ್ಲ : ಖರ್ಗೆ ಸ್ಪಷ್ಟನೆ

Pinterest LinkedIn Tumblr

kargeಬೆಂಗಳೂರು, ಜ.20-ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ಹಸ್ತಕ್ಷೇಪ ಮಾಡುವುದಿಲ್ಲ. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಮುಖ್ಯಮಂತ್ರಿ  ಸಿದ್ದರಾಮಯ್ಯ, ಪಕ್ಷದ ಉಸ್ತುವಾರಿ ದಿಗ್ವಿಜಯ್‌ಸಿಂಗ್ ಅಭ್ಯರ್ಥಿ ಆಯ್ಕೆ ಅಂತಿಮಗೊಳಿಸುತ್ತಾರೆ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ.

ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಆಕಾಂಕ್ಷಿಗಳು ಹೆಚ್ಚಾಗಿರುವುದು ಸಹಜ. ನಾವು ಪಕ್ಷದ ಉನ್ನತ ಸ್ಥಾನದಲ್ಲಿರುವುದರಿಂದ ಆಕಾಂಕ್ಷಿಗಳು ನಮ್ಮ ಮನೆಗೆ ಬರುತ್ತಾರೆ. ಯಾರನ್ನೂ ನಾವು ಬರಬೇಡಿ ಎಂದು ಹೇಳುವುದಕ್ಕೆ ಬರುವುದಿಲ್ಲ. ಅಭ್ಯಥಿಗಳ ಆಯ್ಕೆಯ ವಿಷಯ. ಕೆಪಿಸಿಸಿ ಅಧ್ಯಕ್ಷರು ಪಕ್ಷದ ಉಸ್ತುವಾರಿ ದಿಗ್ವಿಜಯ್‌ಸಿಂಗ್, ಸಿಎಂ ಸಿದ್ದರಾಮಯ್ಯ ಅವರಿಗೆ ಬಿಟ್ಟಿದ್ದು. ನನಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಈ ವಿಷಯದಲ್ಲಿ ನಾವು ಮೂಗು ತೂರಿಸುವುದಿಲ್ಲ ಎಂದರು.

ನಾವು ಹೈಕಮಾಂಡ್ ಆದೇಶಕ್ಕೆ ಬದ್ಧರಾಗಿರುತ್ತೇವೆ. ಯಾರಿಗೇ ಟಿಕೆಟ್ ನೀಡಿದರೂ ನಾವೆಲ್ಲ ಒಟ್ಟಾಗಿ ಕೆಲಸ ಮಾಡುತ್ತೇವೆ. ಒಟ್ಟಾರೆ ನಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವು ನಮಗೆ ಮುಖ್ಯ ಎಂದು ಖರ್ಗೆ ಪ್ರತಿಕ್ರಿಯಿಸಿದರು. ಖರ್ಗೆ ನಿವಾಸಕ್ಕೆ ಆಗಮಿಸಿದ ಸಮಾಜಕಲ್ಯಾಣ ಸಚಿವ ಎಚ್.ಆಂಜನೇಯ ಅವರೊಂದಿಗೆ ಮಾತುಕತೆ ನಡೆಸಿ, ಇದೊಂದು ಸೌಜನ್ಯ ಭೇಟಿ. ನಮ್ಮ ಹಿರಿಯ ನಾಯಕರನ್ನು ಭೇಟಿ ಮಾಡಲು ಬಂದಿದ್ದೇನೆ ಎಂದು ಹೇಳಿದರು. ನಮ್ಮ ಪಕ್ಷದಲ್ಲಿ ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ಯಾವುದೇ ಗೊಂದಲವಿಲ್ಲ. ಒಮ್ಮತದ ಅಭ್ಯರ್ಥಿಯನ್ನು ಚುನಾವಣಾ ಕಣಕ್ಕಿಳಿಸಲಾಗು ವುದು ಎಂದು ತಿಳಿಸಿದರು.

Write A Comment