ಕರ್ನಾಟಕ

ಚುನಾವಣೆ ಸಂದರ್ಭದಲ್ಲಿ ಹಣ ಹಂಚಿಕೆ ಸರ್ವೇಸಾಮಾನ್ಯ: ದಿನೇಶ್ ಗುಂಡೂರಾವ್

Pinterest LinkedIn Tumblr

dineshgunduraoಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಹಣ ಹಂಚಿಕೆ ಸರ್ವೆಸಾಮಾನ್ಯ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಹೇಳಿದ್ದಾರೆ.

ಇಂದು ಹೆಬ್ಬಾಳ ವಿಧಾನಸಭೆ ಉಪ ಚುನಾವಣೆ ಹಿನ್ನೆಲೆಯಲ್ಲಿ ಮತದಾನದ ಬಳಿಕ ಕಾಂಗ್ರೆಸ್ ಮುಖಂಡರು ಬಹಿರಂಗವಾಗಿ ಹಣ ಹಂಚುತ್ತಿದ್ದಾರೆ ಎಂಬ ಹೆಬ್ಬಾಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೈಎ ನಾರಾಯಣ ಸ್ವಾಮಿ ಅವರ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ದಿನೇಶ್ ಗುಂಡೂರಾವ್ ಅವರು, ಇತ್ತೀಚಿಗೆ ಚುನಾವಣೆ ಸಂದರ್ಭದಲ್ಲಿ ಹಣ ಹಂಚುವುದು ಸಾಮಾನ್ಯವಾಗಿದೆ. ಆದರೆ ಹಣ ಹಂಚಿಕೆಯಾಗುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.

ಇದೇ ವೇಳೆ ಪ್ರತಿಪಕ್ಷ ಬಿಜೆಪಿ ವಿರುದ್ಧವೂ ವಾಗ್ದಾಳಿ ನಡೆಸಿದ ಸಚಿವ, ಹಣ ಹಂಚುವುದು ಸೇರಿದಂತೆ ಬಿಜೆಪಿ ಚುನಾವಣಾ ತಂತ್ರಗಾರಿಕೆಯಲ್ಲಿ ಬಿಜೆಪಿಯವರು ನಿಸ್ಸೀಮರು ಎಂದರು. ಅಲ್ಲದೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದರು.

ಹೆಬ್ಬಳಾ, ಬೀದರ್ ಹಾಗೂ ದೇವದುರ್ಗ ವಿಧಾಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಇಂದು ಮತದಾನ ನಡೆದಿದ್ದು, ಫೆಬ್ರುವರಿ 16ರಂದ ಫಲಿತಾಂಶ ಪ್ರಕಟಗೊಳ್ಳಲಿದೆ.

Write A Comment