ಬೆಂಗಳೂರು: ರಾಜ್ಯದ ಮೂರು ವಿಧಾನಸಭೆ ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ. ಎರಡರಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಒಂದು ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಜಯ ಸಾಧಿಸಿದೆ. ಇನ್ನು 2 ವಿಧಾನ ಸಭೆ ಕ್ಷೇತ್ರಗಳ ಗೆಲುವಿನ ಬಗ್ಗೆ ಬಿಜೆಪಿ ನಾಯಕರು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.
ಇಡೀ ಸಂಪುಟವೇ ಭ್ರಷ್ಟಾಚಾರದಿಂದ ಕೂಡಿದೆ, ರಾಜ್ಯ ಸರಕಾರದ ದುರಾಡಳಿತಕ್ಕೆ ಮತದಾರರು ಉಪ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.
ಯಾದಗಿರಿಯಲ್ಲಿ ಮಾತನಾಡಿದ ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸವಿದೆ ಎಂದರು. 15 ಜಿಪಂ ಮತ್ತು 100 ತಾಪಂ ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸ ವ್ಯಕ್ತ ಪಡಿಸಿದರು.
ದೇವದುರ್ಗ ಅಭ್ಯರ್ಥಿ ಶಿವನಗೌಡ ನಾಯಕ ಮಾತನಾಡಿ ಗೆಲುವಿನ ಸಡಗರ ಹಂಚಿಕೊಂಡ್ರು. ಮತದಾರರಿಗೆ ಕೋಟ್ಯಂತರ ರೂ. ಹಂಚಿದರೂ ಕಾಂಗ್ರೆಸ್‌ಗೆ ಸೋಲಾಗಿದೆ ಎಂದು ಟೀಕಿಸಿದರು.