ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಕಾರ್ಮಿಕರು ನಗರದಲ್ಲಿ ಇಂದು ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಸಿದರು.
ರಾಜ್ಯದ ಹಲವು ಭಾಗಗಳಿಂದ ಬಂದಿದ್ದ ನೂರಾರು ಕಾರ್ಮಿಕರು ಸಿಟಿ ರೈಲ್ವೆ ನಿಲ್ದಾಣದಲ್ಲಿ ಸೇರಿ ಅಲ್ಲಿಂದ ಫ್ರೀಡಂ ಪಾರ್ಕ್‌ವರೆಗೆ ರ್‍ಯಾಲಿ ನಡೆಸಿ ಸಮಾವೇಶಗೊಂಡರು.
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಹಲವು ಕಾರ್ಮಿಕ ಮುಖಂಡರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಉಗ್ರ ಹೋರಾಟ ನಡೆಸಲು ಸಜ್ಜಾಗುವಂತೆ ಕರೆ ನೀಡಿದರು.ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಈ ಪ್ರತಿಭಟನಾ ರ್‍ಯಾಲಿಯನ್ನು ಆಯೋಜಿಸಿತ್ತು.