ಕರ್ನಾಟಕ

ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಉಗ್ರರ ಸಂಚು?

Pinterest LinkedIn Tumblr

5ಬೆಂಗಳೂರು: ನಗರದದಲ್ಲಿ ಏಪ್ರಿಲ್‌ 17ರಂದು ವಿಧ್ವಂಸಕ ಕೃತ್ಯ ಎಸಗಲು ಉಗ್ರರು ಸಂಚು ರೂಪಿಸಿದ್ದಾರೆ ಎಂಬ ಆತಂಕಕಾರಿ ಮಾಹಿತಿಯನ್ನು ಕೇಂದ್ರ ಗುಪ್ತಚರ ಇಲಾಖೆ ಪೊಲೀಸರಿಗೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ನಗರದೆಲ್ಲೆಡೆ ಕಟ್ಟೆಚ್ಚರ ವಹಿಸಿದ್ದಾರೆ.

ನಗರವನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಲು ಸಂಚು ರೂಪಿಸಿರುವ ಮಾಹಿತಿ ಆಧರಿಸಿ ರಾಷ್ಟ್ರೀಯ ತನಿಖಾ ತಂಡ (ಎನ್‌ಐಎ) ಅಧಿಕಾರಿಗಳು ನಗರಕ್ಕೆ ಆಗಮಿಸಿದ್ದು, ಇಲ್ಲಿ ಅಡಗಿರುವ ಉಗ್ರರರಿಗಾಗಿ ಶೋಧ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಆ ಕುರಿತ ಮಾಹಿತಿ ನೀಡಲು ನಗರದ ಹಿರಿಯ ಪೊಲೀಸ್‌ ಅಧಿಕಾರಿಗಳು ನಿರಾಕರಿಸಿದ್ದಾರೆ. ಅಲ್ಲದೆ, ಅಂತಹ ಯಾವುದೇ ಮಾಹಿತಿ ಕೇಂದ್ರ ಗುಪ್ತಚರ ಇಲಾಖೆಯಿಂದ ಬಂದಿಲ್ಲ ಎಂದು ಹೇಳಿದ್ದಾರೆ.

ಆದರೆ, ಶಂಕಿತ ಉಗ್ರರು ನಗರದಲ್ಲಿ ಅಡಗಿರುವ ಮಾಹಿತಿ ದೊರೆತ ಕಾರಣ ಆಗ್ನೇಯ ವಿಭಾಗಕ್ಕೆ ಧಾವಿಸಿದ ಎನ್‌ಐಎ
ಅಧಿಕಾರಿಗಳು ಅಲ್ಲಿ ಹುಡುಕಾಟ ನಡೆಸಿದ್ದಾರೆ. ಈ ಬಗ್ಗೆ ರಾಜ್ಯದ ಅಂತರಿಕ ಭದ್ರತಾ ಪಡೆ, ಗುಪ್ತದಳ ಅಧಿಕಾರಿಗಳೊಂದಿಗೆ ಮಾಹಿತಿ ವಿನಿಮಯ ಮಾಡಿಕೊಂಡು ಶೋಧ ಕಾರ್ಯ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇತ್ತೀಚೆಗೆ ಅಸ್ಸಾಂ ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ಐಸಿಸ್‌ ಜೊತೆ ನಂಟು ಹೊಂದಿದ್ದ ಬೋಡೋ ಉಗ್ರರನ್ನು ನಗರದಲ್ಲಿ ಬಂಧಿಸಿದ್ದರು. 2013ರ ಏಪ್ರಿಲ್‌ 17ರಂದು ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿ ಬಳಿ ಉಗ್ರರು ಬಾಂಬ್‌ ಸ್ಫೋಟಿಸಿದ್ದರು. ಘಟನೆಯಲ್ಲಿ 16 ಮಂದಿ ಗಾಯಗೊಂಡಿದ್ದರು. ಆದರೆ, ಸ್ಫೋಟದ ತೀವ್ರತೆ ಕಡಿಮೆ ಇದ್ದುದರಿಂದ ಹೆಚ್ಚಿನ ಅನಾಹುತ ಸಂಭವಿಸಿರಲಿಲ್ಲ. ಇದೀಗ ಮತ್ತೆ ಏಪ್ರಿಲ್‌ 17ರಂದು ಉಗ್ರರು ವಿಧ್ವಂಸಕ ಕೃತ್ಯ ನಡೆಸುವ ಮಾಹಿತಿ ಹೊರಬಿದ್ದಿದೆ.

ನಗರದಲ್ಲಿ ಉಗ್ರರು ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದಾರೆ ಎಂದುಕೇಂದ್ರ ಗುಪ್ತಚರ ಇಲಾಖೆಯಿಂದ ಯಾವುದೇ ಮಾಹಿತಿ ಬಂದಿಲ್ಲ. ಯಾವುದೇ ಸಂದರ್ಭದಲ್ಲೂ ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸಲು ಸಿದ್ಧರಿದ್ದಾರೆ.

ಕಿ ಎನ್‌.ಎಸ್‌.ಮೇಘರಿಕ್‌, ನಗರ ಪೊಲೀಸ್‌ ಆಯುಕ್ತ
-ಉದಯವಾಣಿ

Write A Comment