ಕರ್ನಾಟಕ

ಅಸ್ಸಾಂನಲ್ಲಿ ರಾಹುಲ್ ಜತೆ ಡಿಕೆಶಿ ಚುನಾವಣಾ ಪ್ರಚಾರ

Pinterest LinkedIn Tumblr

dkcಬೆಂಗಳೂರು, ಏ. ೫- ರಾಜ್ಯದ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅಸ್ಸಾಂನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಉಪಾಧ್ಯಕ್ಷ ರಾಹುಲ್‌ಗಾಂಧಿ ಜತೆಗೂಡಿ ಪ್ರಚಾರ ನಡೆಸಿದ್ದಾರೆ.
ಕಳೆದ ೪ ದಿನಗಳಿಂದ ಅಸ್ಸಾಂನಲ್ಲೇ ಬೀಡು ಬಿಟ್ಟಿರುವ ಸಚಿವ ಡಿ.ಕೆ. ಶಿವಕುಮಾರ್ ಪಕ್ಷದ ಯುವರಾಜ ರಾಹುಲ್‌ಗಾಂಧಿಯವರೊಂದಿಗೆ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡಿದ್ದಾರೆ.
ಅಸ್ಸಾಂನ ೧೮ ವಿಧಾನಸಭಾ ಕ್ಷೇತ್ರಗಳಲ್ಲಿ ಸಚಿವ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸಿದ್ದಾರೆ.
ಪಕ್ಷದ ಹೈಕಮಾಂಡ್‌ನ ಸೂಚನೆಯಂತೆ ಸಚಿವ ಡಿ.ಕೆ. ಶಿವಕುಮಾರ್ ಅಸ್ಸಾಂನಲ್ಲಿ ಪಕ್ಷದ ಪರವಾಗಿ ಪ್ರಚಾರದ ಮುಂಚೂಣಿಯಲ್ಲಿದ್ದು, ಚುನಾವಣಾ ಆಗು-ಹೋಗುಗಳಲ್ಲಿ ಪಾಲ್ಗೊಂಡಿದ್ದಾರೆ.
ಸ್ಥಳೀಯ ನಾಯಕರೊಂದಿಗೆ ಬಾಂಧವ್ಯ ಇಟ್ಟುಕೊಂಡಿರುವ ಡಿ.ಕೆ. ಶಿವಕುಮಾರ್ ಬೆಳಿಗ್ಗೆಯಿಂದ ಸಂಜೆವರೆಗೂ ಬಿರುಸಿನ ಪ್ರಚಾರ ನಡೆಸಿದ್ದಾರೆ.
ಅಸ್ಸಾಂನ ಜಾನುಬಾರಿ ಹಾಗೂ ಜಾಗೀರ್ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿಯನ್ನು ಪಕ್ಷದ ಹೈಕಮಾಂಡ್ ಡಿ.ಕೆ. ಶಿವಕುಮಾರ್‌ರವರಿಗೆ ವಹಿಸಿದ್ದು, ಅದರಂತೆ ಈ ತಿಂಗಳ ೭ರ ವರೆಗೂ ಡಿ.ಕೆ. ಶಿವಕುಮಾರ್ ಅಲ್ಲಿಯೇ ಇದ್ದು ಪ್ರಚಾರ ನಡೆಸಲಿದ್ದಾರೆ.
ಅಸ್ಸಾಂನಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ. ಜನರು ಪಕ್ಷದ ಪರವಾಗಿ ಒಲವು ವ್ಯಕ್ತಪಡಿಸುತ್ತಿದ್ದಾರೆ ಎಂದು ಅಸ್ಸಾಂನಲ್ಲಿ ಚುನಾವಣಾ ಪ್ರಚಾರದಲ್ಲಿರುವ ಸಚಿವ ಡಿ.ಕೆ. ಶಿವಕುಮಾರ್ ತಮ್ಮನ್ನು ಸಂಪರ್ಕಿಸಿದ “ಸಂಜೆವಾಣಿ”ಗೆ ತಿಳಿಸಿದರು.
ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್‌ನ ಆದೇಶದಂತೆ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದೇನೆ. ಅಸ್ಸಾಂನಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ ಎಂದು ಅವರು ಹೇಳಿದರು.

Write A Comment