ಕರ್ನಾಟಕ

ಪ್ರಶ್ನೆ ಪತ್ರಿಕೆ ಲೀಕ್ ಪ್ರಕರಣ: ಆರೋಪಿ ವೈದ್ಯಕೀಯ ಶಿಕ್ಷಣ ಸಚಿವರ ವಿಶೇಷಾಧಿಕಾರಿ ಓಬಳ್ ರಾಜ್ ಸೇವೆಯಿಂದ ವಜಾ

Pinterest LinkedIn Tumblr

obala

ಬೆಂಗಳೂರು: ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರ ವಿಶೇಷ ಅಧಿಕಾರಿ ಓಬಳ್ ರಾಜ್ ಅವರನ್ನು ಮಂಗಳವಾರ ಸೇವೆಯಿಂದ ವಜಾಗೊಳಿಸಲಾಗಿದೆ.

ಮಾರ್ಚ್ 21ರ ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಓಬಳ್ ರಾಜ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸುವಂತೆ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಡಿಪಿಎಆರ್ ಪ್ರಧಾನ ಕಾರ್ಯದರ್ಶಿಗೆ ಇಂದು ಪತ್ರ ಬರೆದಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆಯ ದೊಡ್ಡ ಜಾಲವನ್ನು ಭೇದಿಸಿದ್ದ ಸಿಐಡಿ ನಿನ್ನೆ ಶರಣಪ್ರಕಾಶ್ ಪಾಟೀಲ್ ಅವರ ವಿಶೇಷ ಅಧಿಕಾರಿ ಓಬಳ್ ರಾಜ್, ಬೆಂಗಳೂರಿನ ವಿಜಯನಗರದಲ್ಲಿರುವ ಕೇಂಬ್ರಿಡ್ಜ್ ಕಾಲೇಜ್ ನ ದೈಹಿಕ ಶಿಕ್ಷಕ ಹಾಗೂ ಎಲ್ಐಸಿ ಏಜೆಂಟ್ ಸಹ ಆಗಿರುವ ಮಂಜುನಾಥ್ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿ ರುದ್ರಪ್ಪ ಎಂಬುವವರನ್ನು ಬಂಧಿಸಿದ್ದರು.

ಬಂಧಿತ ಆರೋಪಿಗಳನ್ನು ಸಿಐಡಿ ಇಂದು 7ನೇ ಎಸಿಎಂಎಂ ಕೋರ್ಟ್ ಹಾಜರುಪಡಿಸಿದರು, ವಿಚಾರಣೆ ನಡೆಸಿದ ಕೋರ್ಟ್, ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು ಏಪ್ರಿಲ್ 13ರವರೆಗೆ ಸಿಐಡಿ ವಶಕ್ಕೆ ನೀಡಿದೆ.

Write A Comment