ಬೆಳಗಾವಿ: ಬಿರು ಬಿಸಿಲಿನಿಂದ ಕಂಗೆಟ್ಟಿದ್ದ ಬೆಳಗಾವಿ ಜಿಲ್ಲೆಯಲ್ಲಿ ಶುಕ್ರವಾರ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ದಂಪತಿ ಹಾಗೂ ಪುತ್ರ ಸ್ಥಳದಲ್ಲೇ ಮೃತಪಟ್ಟ ಘಟನೆ ಅಥಣಿ ತಾಲೂಕಿನ ಸವದಿ ಗ್ರಾಮದಲ್ಲಿ ನಡೆದಿದೆ.
ದಂಪತಿ ಆದೇಶ ಅಲಗೂರು(38), ಅನಂತಮತಿ(35) ಹಾಗೂ 15 ವರ್ಷದ ಪುತ್ರ ದರ್ಶನ್ ಸವದಿ ಬಳಿ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ದಂಪತಿ ಹಾಗೂ ಮಗ ಗಾಳಿಯಿಂದ ರಕ್ಷಣೆ ಪಡೆಯಲು ಮರದಡಿ ನಿಂತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.