ಕೆ.ಆರ್.ನಗರ: ಪಟ್ಟಣದ ಕೆ.ಎಸ್.ಆರ್.ಟಿ.ಸಿ. ಬಸ್ ಡಿಪೋನಲ್ಲಿ ಮೆಕ್ಯಾನಿಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜೇಶ್ ಮಠಪತಿ(27) ಡಿಪೋನಲ್ಲೇ ನೇಣು ಬಿಗಿದುಕೊಂಡು ಸಾವಿನಪ್ಪಿರುವ ಘಟನೆ ನಡೆದಿದೆ.
ಸುಮಾರು 7 ವರ್ಷಗಳಿಂದ ಕೆ.ಆರ್.ನಗರ ಘಟಕದಲ್ಲಿ ಮೆಕ್ಯಾನಿಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜೇಶ್ ಮಠಪತಿ ಮೂಲತಃ ಬಳ್ಳಾರಿ ಜಿಲ್ಲೆಯ ಕೊಟ್ಟೂರು ಗ್ರಾಮದವನ್ನಾಗಿದ್ದು ಈತನಿಗೆ ಪತ್ನಿ ಮತ್ತು ಓರ್ವ ಪುತ್ರಿ ಇದ್ದಾರೆ.
ನೆನ್ನೆ ರಾತ್ರಿ ಈತ ಕರ್ತವ್ಯದಲ್ಲಿ ಇಲ್ಲದಿದ್ದರೂ ಭದ್ರತಾ ಸಿಬ್ಬಂದಿಯ ಕಣ್ಣು ತಪ್ಪಿಸಿಕೊಂಡು ಡಿಪೋನ ಒಳ ನುಗಿದ್ದು ಸಿಬ್ಬಂದಿಗಳು ಮಲಗಿದ ನಂತರ ಈತ ನೇಣಿಗೆ ಶರಣಾಗಿರಬಹುದೆಂದು ಎಂದು ಘಟಕದ ವ್ಯವಸ್ಥಾಪಕ ಕೃಷ್ಣಮೂರ್ತಿ ಸಂಶಯ ವ್ಯಕ್ತಪಡಿಸಿದ್ದಾರೆ. ಬೆಳಗ್ಗೆ 5 ಗಂಟೆಯ ಸಮಯದಲ್ಲಿ ಎಂದಿನಂತೆ ಸಿಬ್ಬಂದಿ ಒಳ ಬಂದು ನೋಡಿದಾಗ ರಾಜೇಶ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವುದು ಪತ್ತೆಯಾಗಿದೆ.
ಸುದ್ದಿ ತಿಳಿದು ಕೆ.ಆರ್.ನಗರ ಪೊಲೀಸ್ ಠಾಣೆಯ ಪಿಎಸ್‍ಐ ಶ್ರೀಕಾಂತ್ ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ನಂತರ ಶವದ ಮರಣೋತ್ತರ ಪರೀಕ್ಷೆಯನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆಸಿ ನಂತರ ಶವವನ್ನು ವರಸು ದಾರರಿಗೆ ಒಪ್ಪಿಸಲಾಯಿತು.