ಬೆಂಗಳೂರು: ಬೆಂಗಳೂರಿನ ಕುರುಬರಹಳ್ಳಿಯಲ್ಲಿ ಗುರುವಾರ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.
ನಿಂತಿದ್ದ ಸ್ಟೇಷನರಿ ಲಾರಿಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ, ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತರು ಕಲಬುರ್ಗಿ ಮೂಲದ ಕುಲಿ ಕಾರ್ಮಿಕರು ಎನ್ನಲಾಗಿದೆ. ಈ ಸಂಬಂಧ ರಾಜಾಜಿನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.