ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಫಲಿತಾಂಶ ಪ್ರಕಟಿಸಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.
ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶಕ್ಕೆ ಸಂಬಂಧಿಸಿದ ಎಲ್ಲಾ ರೀತಿಯ ಕಾರ್ಯಗಳು ಪೂರ್ಣಗೊಂಡಿವೆ. ಫಲಿತಾಂಶ ಪಟ್ಟಿ ಸಿದ್ಧವಾಗಿದ್ದು, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರಿಂದ ಫಲಿತಾಂಶ ಪ್ರಕಟಣೆಗೆ ದಿನಾಂಕ ನಿಗದಿಯಾದ ಬಳಿಕ ಫಲಿತಾಂಶ ಘೋಷಣೆಯಾಗಲಿದೆ ಎಂಬ ಮಾಹಿತಿ ಶಿಕ್ಷಣ ಇಲಾಖೆಯ ಮೂಲಗಳಿಂದ ತಿಳಿದು ಬಂದಿದೆ.
ಮಂಗಳವಾರ ಫಲಿತಾಂಶ ದಿನಾಂಕ ನಿಗದಿಗಾಗಿ ಅಧಿಕಾರಿಗಳ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ಫಲಿತಾಂಶ ದಿನಾಂಕ ನಿಗದಿ ಮಾಡುವಲ್ಲಿ ವಿಫಲವಾಗಿತ್ತು. ಹೀಗಾಗಿ ಮತ್ತೊಮ್ಮೆ ಸಭೆ ನಡೆಸಿ ಫಲಿತಾಂಶ ದಿನಾಂಕ ಪ್ರಕಟಿಸುವ ಸಾಧ್ಯತೆ ಇದೆ.