ಮೈಸೂರು, ಮೇ ೨೬ – ರಾಜ್ಯಸಭೆ ಮತ್ತು ವಿಧಾನ ಪರಿಷತ್‌ಗೆ ಮುಂದಿನ ತಿಂಗಳು ನಡೆಯಲಿರುವ ಚುನಾವಣೆಯ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಪಕ್ಷದ ಹೈಕಮಾಂಡ್ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯಸಭೆ ಮತ್ತು ವಿಧಾನ ಪರಿಷತ್‌ಗೆ ಅಭ್ಯರ್ಥಿಗಳ ಪಟ್ಟಿ ದೊಡ್ಡದಿರುವ ಹಿನ್ನೆಲೆಯಲ್ಲಿ ಯಾರನ್ನು ಕಣಕ್ಕಿಳಿಸಬೇಕು ಎನ್ನುವ ಬಗ್ಗೆ ಪಕ್ಷದ ಅಧ್ಯಕ್ಷೆ
ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರೊಂದಿಗೆ ಚರ್ಚೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸಭೆ ಹಾಗೂ ವಿಧಾನ ಪರಿಷತ್‌ಗೆ ನಾಮಪತ್ರ ಸಲ್ಲಿಸಲು ಈ ತಿಂಗಳ ೩೧ ರಂದು ಕೊನೆಯ ದಿನವಾಗಿರುವ ಹಿನ್ನೆಲೆಯಲ್ಲಿ ಅಷ್ಟರೊಳಗೆ ಅಭ್ಯರ್ಥಿಗಳನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.
ಬರಕ್ಕೆ ನೆರವು
ದೆಹಲಿಯ ಭೇಟಿಯಯ ಸಂದರ್ಭದಲ್ಲಿ ಕೇಂದ್ರದ ಸಚಿವರನ್ನು ಭೇಟಿ ಮಾಡಿ ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗುವುದು. ಈಗಾಗಲೇ ರಾಜ್ಯ ಸರ್ಕಾರ ಕೇಂದ್ರಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಿದೆ. ಈಗ ಮತ್ತೊಮ್ಮೆ ಮನವಿ ಮಾಡಿ ನೆರವು ಕೇಳುವುದಾಗಿ ಹೇಳಿದರು.
ವರದಿ ಕೇಳಿಲ್ಲ
ಕರ್ನಾಟಕ ಲೋಕಸೇವಾ ಆಯೋಗಕ್ಕೆ ಅಧ್ಯಕ್ಷರನ್ನಾಗಿ ಬಿಡಿಎ ಅಧ್ಯಕ್ಷ ಶ್ಯಾಮ್ ಭಟ್ ಅವರ ಹೆಸರನ್ನು ರಾಜ್ಯಪಾಲರಿಗೆ ಶಿಫಾರಸು ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರಿಂದ ಯಾವುದೇ ಸ್ಪಷ್ಟೀಕರಣ ಕೇಳಿ ಸರ್ಕಾರಕ್ಕೆ ಪತ್ರ ಬಂದಿಲ್ಲ ಎಂದು ಹೇಳಿದರು.
ಬಿಜೆಪಿ ನಾಯಕರು ಶ್ಯಾಮ್ ಭಟ್ ಅವರ ವಿರುದ್ಧ ಮಾಡಿರುವ ಆರೋಪಗಳು ನಿರಾಧಾರ. ಬಿಜೆಪಿಯ ನಾಯಕರು ಸತ್ಯವನ್ನು ಹೇಳುತ್ತಾರೆಯೇ ಎಂದು ಪ್ರಶ್ನಿಸಿದ ಅವರು, ಈ ಸಂಬಂಧ ರಾಜ್ಯಪಾಲರು ಯಾವುದೇ ವಿವರ ಕೇಳಿಲ್ಲ ಎಂದು ಸ್ಪಷ್ಟಪಡಿಸಿದರು.
ಪೊಲೀಸರ ಧರಣಿ ಇಲ್ಲ
ನಾನಾ ಬೇಡಿಕೆಗಳ ಈಡೇರಿಕೆಗಾಗಿ ಜೂನ್ ೪ ರಂದು ರಾಜ್ಯಾದ್ಯಂತ ಪೊಲೀಸರು ಧರಣಿ ನಡೆಸಲು ನಿರ್ಧರಿಸಿರುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪೊಲೀಸರು ಧರಣಿ ನಡೆಸುವುದಿಲ್ಲ ಎನ್ನುವ
ವಿಶ್ವಾಸವಿದೆ. ಪೊಲೀಸರೂ ಕೂಡ ಕೆಲ ಸಾಹಸಕ್ಕೆ ಕೈಹಾಕುವುದಿಲ್ಲ.
ಪೊಲೀಸರು ಧರಣಿ ನಡೆಸಿರುವ ಉದಾಹರಣೆಗಳು ಕಡಿಮೆ. ಹೀಗಾಗಿ ಧರಣಿ ನಡೆಸುವುದಿಲ್ಲ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.
ಕರ್ನಾಟಕ
Comments are closed.