ಕರ್ನಾಟಕ

ಮುಂಬೈ ಅಂದೇರಿಯಲ್ಲಿ ಅಗ್ನಿ ಅವಘಡ: 9 ಮಂದಿ ಸಾವು.

Pinterest LinkedIn Tumblr

mumbai_fire_medical

ಮುಂಬೈ ಜೂನ್.30 ಮುಂಬೈನಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ದುರಂತ ಸಂಭವಿಸಿದೆ. ಈ ದುರಂತದಲ್ಲಿ 9 ಮಂದಿ ಸಾವನ್ನಪ್ಪಿದ್ದು, ಓರ್ವ ಗಂಭೀರಗೊಂಡಿದ್ದಾರೆ.

ಅಂದೇರಿ ಪ್ರದೇಶದ ವಫಾ ಎಂಬ ಮೆಡಿಕಲ್ ಶಾಪ್ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ೯ ಮಂದಿ ಸಾವನ್ನಪ್ಪಿದ್ದು, ಓರ್ವ ಗಂಭೀರಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೆಡಿಕಲ್ ಶಾಪ್ನಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ.

ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದೆ. ಶಾರ್ಟ್ ಸಕ್ರ್ಯೂಟ್ನಿಂದ ದುರಂತ ಸಂಭವಿಸಿದೆ ಎನ್ನಲಾಗುತ್ತಿದ್ದು, ತನಿಖೆಗೆ ಆದೇಶಿಸಲಾಗಿದೆ.

Comments are closed.