ಬೆಂಗಳೂರು: ನಿರಂತರ ಕೆಲಸದೊತ್ತಡ ಹಾಗೂ ಜ್ವರದಿಂದ ಬಳಲುತ್ತಿದ್ದ ನಟ ಸುದೀಪ್ ಅಪಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಬ್ಬುಲಿ ಚಿತ್ರದ ಚಿತ್ರೀಕರಣಕ್ಕಾಗಿ ಮೈಸೂರಿಗೆ ತೆರಳಿದ್ದ ಅವರಿಗೆ ಮೊನ್ನೆ ರಾತ್ರಿ ತೀವ್ರ ಹೊಟ್ಟೆನೋವಿನೊಂದಿಗೆ ಜ್ವರವೂ ಕಾಣಿಸಿಕೊಂಡಿತ್ತು. ಅಲ್ಲೇ ವೈದ್ಯರಿಂದ ತಪಾಸಣೆಗೊಳಪಟ್ಟರಾದರೂ ನೋವು ಕಡಿಮೆಯಾಗದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿಗೆ ಆಗಮಿಸಿ ಅಪಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿರಂತರವಾಗಿ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ಬಿಡುವಿಲ್ಲದ ಕೆಲಸ ಹಾಗೂ ಒತ್ತಡದಿಂದಾಗಿ ಜ್ವರ ಕಾಣಿಸಿಕೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಕ್ಯಾಮೆರಾಮನ್ ಕೃಷ್ಣ ಅವರ ನಿರ್ದೇಶನದಲ್ಲಿ ಹೆಬ್ಬುಲಿ ಚಿತ್ರ ಮೂಡಿ ಬರುತ್ತಿದ್ದು, ರಘುನಾಥ್ ನಿರ್ಮಾಣ ಮಾಡುತ್ತಿದ್ದಾರೆ. ಇದರ ಚಿತ್ರೀಕರಣ ಭರದಿಂದ ಸಾಗಿದ್ದು, ಇದರಲ್ಲಿ ಸುದೀಪ್ ತೊಡಗಿದ್ದರು. ಸುದೀಪ್ ಅವರ ಕೋಟಿಗೊಬ್ಬ-2 ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ.
Comments are closed.