ಕರ್ನಾಟಕ

ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣ : ಪ್ರವೀಣ್ ಖಂಡ್ಯಾ ಸಿಐಡಿ ವಶಕ್ಕೆ

Pinterest LinkedIn Tumblr

praveen khaandya

ಚಿಕ್ಕಮಗಳೂರು: ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣ ಸಂಬಂಧ ವಿಶ್ವ ಹಿಂದೂ ಪರಿಷತ್ ಸಂಚಾಲಕ ಪ್ರವೀಣ್ ಕಂಡ್ಯಾ ಅವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಚಿಕ್ಕಮಗಳೂರಿನ ತೇಜಸ್‍ಗೌಡ ಎಂಬುವರ ಅಪಹರಣ ಹಾಗೂ ಡಿವೈಎಸ್ಪಿ ಆತ್ಮಹತ್ಯೆ ಪ್ರಕರಣದ ವಿಚಾರಣೆ ನಡೆಸಲು ಪ್ರವೀಣ್ ಅವರನ್ನು ವಶಕ್ಕೆ ಪಡೆದಿರುವ ಸಿಐಡಿ ಅಧಿಕಾರಿಗಳು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸ್ ಮಾಹಿತಿದಾರರಾಗಿ ಪ್ರವೀಣ್ ಖಂಡ್ಯಾ ಕಾರ್ಯ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದ್ದು, ಈಗಾಗಲೇ ಖಂಡ್ಯಾ ವಿರುದ್ದ ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ ಜಿಲ್ಲೆಯ ಠಾಣೆಗಳಲ್ಲಿ 30ಕ್ಕೂ ಹೆಚ್ಚು ಪ್ರಕರಣ ದಾಖಲಾಗಿವೆ.

ಸಿಐಡಿ ಅಧಿಕಾರಿಗಳು ಜಿಲ್ಲೆಯಲ್ಲಿ ಮೊಕ್ಕಾಂ ಹೂಡಿದ್ದು, ಕಳೆದ 24ರಂದು ಚಿಕ್ಕಕೊಳಲೆ ತೋಟವೊಂದರಲ್ಲಿ ಜೂಜಾಡುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದ ಸಿಐಡಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಈ ಮಧ್ಯೆ ಸಿಪಿಐ(ಎಂಎಲ್) ರಾಜ್ಯ ಕಾರ್ಯದರ್ಶಿ ರುದ್ರಯ್ಯ ಸರ್ಕಾರಕ್ಕೆ ಪತ್ರ ಬರೆದು, ಪ್ರವೀಣ್ ಖಂಡ್ಯಾ ಅವರನ್ನು ಗಡಿಪಾರು ಮಾಡುವ ಮೂಲಕ ಜಿಲ್ಲೆಯಲ್ಲಿ ತಲೆ ಎತ್ತಿರುವ ಕ್ರಿಕೆಟ್ ಬೆಟ್ಟಿಂಗ್, ಭ್ರಷ್ಟಾಚಾರ, ಜೂಜು ಸೇರಿದಂತೆ ಇತರೆ ಅಪರಾಧ ಪ್ರಕರಣವನ್ನು ನಿಯಂತ್ರಿಸಬೇಕು ಎಂದು ಆರೋಪಿಸಿರುವ ಎಸ್‍ಪಿ ಅವರನ್ನು ಜಿಲ್ಲೆಯಂದ ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

Comments are closed.