ಬೆಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಕುರಿತಂತೆ ಮಾಜಿ ಗೃಹಸಚಿವ ಕೆ.ಜೆ.ಜಾರ್ಜ್ ಬಂಧನಕ್ಕೆ ಆಗ್ರಹಿಸಿ ಇಂದು ಬಿಜೆಪಿ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಮೈಸೂರು ಸರ್ಕಲ್ ಬಳಿ ಸಂಸದೆ ಶೋಭ ಕರಂದ್ಲಾಜೆ, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ಪಿ.ಸಿ.ಮೋಹನ್, ಅಶ್ವಥ್ ನಾರಾಯಣ್ ಮತ್ತಿತರ ನೇತೃತ್ವದಲ್ಲಿ ಡಿಜಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗಪೊಲೀಸರು ಅವರನ್ನು ಬಂಧಿಸಿ ಬಿಡುಗಡೆ ಮಾಡಿದ್ದಾರೆ.
ಅದಕ್ಕೂ ಮುನ್ನ ಪ್ರತಿಭಟನೆ ವೇಳೆ ಮಾತನಾಡಿದ ಆರ್.ಅಶೋಕ್, ಡಿವೈಎಸ್ಪಿ ಗಣಪತಿ ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿರುವ ಡೆತ್‍ನೋಟ್‍ನಲ್ಲಿ ಕೆ.ಜೆ.ಜಾರ್ಜ್ ಅವರ ಹೆಸರು ಹೇಳಿದ್ದಾರೆ. ಹಾಗಾಗಿ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು. ಡೆತ್‍ನೋಟ್‍ನಲ್ಲಿ ಇನ್ನಿತರ ಅಧಿಕಾರಿಗಳಾದ ಪ್ರಸಾದ್ ಹಾಗೂ ಪ್ರಣಬ್ ಮೊಹಂತಿ ಅವರ ಹೆಸರು ಉಲ್ಲೇಖವಾಗಿದೆ. ಡಿ.ಕೆ.ರವಿ ಪ್ರಕರಣದಲ್ಲೂ ಕೆ.ಜೆ.ಜಾರ್ಜ್ ಅವರ ಹೆಸರು ಕೇಳಿಬಂದಿತ್ತು. ಇಂಥವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದರು.
ದಕ್ಷ ಅಧಿಕಾರಿಗಳು ಕೆಲಸ ಮಾಡದ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ. ಇದಕ್ಕೆ ಕಾರಣವಾಗಿರುವ ಇವರನ್ನು ಕೂಡಲೇ ಕೆಳಗಿಳಿಸಬೇಕು. ಕೆ.ಜೆ.ಜಾರ್ಜ್ ಅವರನ್ನು ಮುಖ್ಯಮಂತ್ರಿಗಳು ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದರು. ಅಲ್ಲಿಂದ ಮೆರವಣಿಗೆ ಹೊರಟು ಡಿಜಿ ಕಚೇರಿಗೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಪೊಲೀಸರು ಆರ್.ಅಶೋಕ್ ಮತ್ತಿತರರನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದರು.
Comments are closed.