ಚಿಕ್ಕಮಗಳೂರು: ಚಾರ್ಮಾಡಿಘಾಟ್ ನ ಅಲಿಖಾನ್ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಇಬ್ಬರು ಪ್ರವಾಸಿಗರು ಕಾಲು ಜಾರಿ ಜಲಪಾತಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ಚಿತ್ರದುರ್ಗ ಜಿಲ್ಲೆಯ ಹನುಮಂತಪ್ಪ ಹಾಗೂ ನಾಗಭೂಷಣ್ ಎಂದು ಗುರುತಿಸಲಾಗಿದೆ. ಮೃತರು ತಮ್ಮ ಸ್ನೇಹಿತರೊಂದಿಗೆ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ವಿವಿಧ ಕಡೆ ಪ್ರವಾಸ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.
ಮೃತರಿಬ್ಬರು ಅಲಿಖಾನ್ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಆಯತಪ್ಪಿ ಪ್ರಪಾತಕ್ಕೆ ಬಿದ್ದು ಮೃತಪಟ್ಟಿದ್ದಾರೆ. ಇನ್ನು ಕೆಲ ತಿಂಗಳ ಹಿಂದಷ್ಟೇ ಮೂಡಿಗೆರೆ ತಾಲೂಕಿನ ಯುವಕನೊಬ್ಬ ಇದೇ ಸ್ಥಳದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಬಿದ್ದು ಮೃತಪಟ್ಟಿದ್ದರು.
Comments are closed.