ಬೆಂಗಳೂರು, ಜು. ೧೯- ಅಪಘಾತದಲ್ಲಿ ಮೃತಪಟ್ಟ ಲಕ್ಕಸಂದ್ರ ವಾರ್ಡ್ನ ಬಿಜೆಪಿ ಸದಸ್ಯ ಕೆ. ಮಹೇಶ್ ಬಾಬು ಅವರ ಕುಟುಂಬ ಸದಸ್ಯರಿಗೆ ನೆರವಾಗಲು ಬಿಬಿಎಂಪಿಯ ಎಲ್ಲಾ 198 ಸದಸ್ಯರು ತಮ್ಮ ಒಂದು ತಿಂಗಳ ವೇತನವನ್ನು ನೀಡುವಂತೆ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್. ರಮೇಶ್ ಅವರು ಮನವಿ ಮಾಡಿದ್ದಾರೆ.
ಈ ಸಂಬಂಧ ಮೇಯರ್ ಮಂಜುನಾಥ ರೆಡ್ಡಿ ಅವರಿಗೆ ಮನವಿ ಪತ್ರ ಸಲ್ಲಿಸಿರುವ ಅವರು, ಈ ತಿಂಗಳಲ್ಲಿ ನಡೆಯುವ ಮಾಸಿಕ ಸಭೆಯಲ್ಲಿ ಸದಸ್ಯರ ಗೌರವ ಧನ ನೀಡುವ ಬಗ್ಗೆ ನಿರ್ಣಯ ಕೈಗೊಳ್ಳುವಂತೆ ತಿಳಿಸಿದ್ದಾರೆ.
ಮಹೇಶ್ ಬಾಬು ಅವರು, ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ವೇಳೆ ಹಾಗೂ ಬಿಬಿಎಂಪಿ ಸದಸ್ಯರಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ಅವರ ಆರ್ಥಿಕ ಸ್ಥಿತಿ ಅಷ್ಟೊಂದು ಉತ್ತಮವಾಗಿಲ್ಲದಿರುವ ಹಿನ್ನೆಲೆಯಲ್ಲಿ ಪಾಲಿಕೆ ಸದಸ್ಯರು ಒಂದು ತಿಂಗಳ ಗೌರವ ವೇತನವನ್ನು ನೀಡುವಂತೆ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
Comments are closed.