ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ತಾಕತ್ತಿದ್ದರೆ ಡಾಲರ್ಸ್ ಕಾಲೋನಿಯಲ್ಲಿ ತೆರವು ಕಾರ್ಯಾಚರಣೆ ಮಾಡಿಸಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಬಹಿರಂಗ ಸವಾಲ್ ಎಸದಿದ್ದಾರೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನದಿ ನೀರು ಹಂಚೆಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿರುವುದಕ್ಕೆ ಸಹಮತ ವ್ಯಕ್ತಪಡಿಸಿದ್ದು, ವಿವಾದ ಇತ್ಯರ್ಥಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶಿಸಲಿ ಎಂದು ಆಗ್ರಹಿಸಿದರು.
ಭಾರತೀಯ ಸೇನೆಯ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಬಿವಿಪಿ ಕಾರ್ಯಕರ್ತರ ಮೇಲೆ ಲಾಠಿ ಚಾರ್ಚ್ ನಡೆಸಿರುವುದು ಸರಿಯಲ್ಲ ಎಂದು ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ್ದರು.
ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ಗೂ ಲೇವಡಿ…..
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಹಿಂದವನ್ನು ಮರೆತಂತೆ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪನವರು ಮರೆಯುತ್ತಾರೆ. ಇದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರಿಗೆ ಮಾಡುವ ಅಪಮಾನ ಎಂದು ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.
Comments are closed.