ಬೆಂಗಳೂರು: 500 ಮತ್ತು 1000 ರು. ನೋಟುಗಳ ಮೇಲೆ ನಿಷೇಧ ಹೇರುವ ಮೂಲಕ ಕಪ್ಪುಹಣ ಮತ್ತು ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಕೇಂದ್ರ ಸರ್ಕಾರದ ನಡೆಯನ್ನು ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಪರೋಕ್ಷವಾಗಿ ಸ್ವಾಗತಿಸಿದ್ದಾರೆ.
ನೋಟ್ ಮೇಲಿನ ನಿಷೇಧ ಕುರಿತಂತೆ ಇಂದು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರದ ಈ ಘೋಷಣೆಯಿಂದಾಗಿ ಎಲ್ಲಡೆ ತೊಂದರೆಯಾಗಿದೆ. ನಿತ್ಯ ವಹಿವಾವಾಟು ಮಾಡುವ ಸಣ್ಣ ಪುಟ್ಟ ವ್ಯಾಪಾರಸ್ಥರ ಮೇಲೆ ಗಂಭೀರ ಪರಿಣಾಮ ಬೀರಿದೆ. ಹೀಗಾಗಿ ಕೇಂದ್ರ ಸರ್ಕಾರ ಮತ್ತಷ್ಟು ದಿನಗಳ ಕಾಲ ಕಾಲಾವಕಾಶ ನೀಡಬೇಕಿತ್ತು. ಕೇಂದ್ರ ಸರ್ಕಾರದ ನಡೆಯಿಂದ ಕಪ್ಪು ಹಣ ಇದ್ದವರಿಗೆ ತೀವ್ರ ತೊಂದರೆಯಾಗಿದೆ. ವೈಟ್ ಮನಿ ಇದ್ದವರಿಗೆ ಯಾವುದೇ ರೀತಿಯ ತೊಂದರೆ ಇಲ್ಲ ಎಂದು ಹೇಳಿದರು.
ಇದೇ ವೇಳೆ ಸರ್ಕಾರದ ಕ್ರಮವನ್ನು ಪರೋಕ್ಷವಾಗಿ ಟೀಕಿಸಿದ ಸಿಎಂ ಕೇಂದ್ರ ಸರ್ಕಾರವೇನೂ ನಮ್ಮನ್ನು ಕೇಳಿ ನಿರ್ಧಾರ ಕೈಗೊಳ್ಳುತ್ತದೆಯೇ..ನೋಟು ಮುದ್ರಣ ಅಧಿಕಾರ ಇರುವುದು ಕೇಂದ್ರಕ್ಕೆ ಮಾತ್ರ ಎಂದು ಸಿದ್ದರಾಮಯ್ಯ ಮಾರ್ಮಿಕವಾಗಿ ಹೇಳಿದ್ದಾರೆ.
Comments are closed.