ಕರ್ನಾಟಕ

‘ಮಾಸ್ತಿಗುಡಿ’ ಚಿತ್ರೀಕರಣದ ವೇಳೆ ನಡೆದ ದುರಂತ; ಉದಯ್ ಮೃತದೇಹ ಪತ್ತೆ: ಮುಗಿಲು ಮುಟ್ಟಿದ ಕುಟುಂಬದವರ ಆಕ್ರಂದನ

Pinterest LinkedIn Tumblr

uday-act

ಮಾಗಡಿ: “ಮಾಸ್ತಿಗುಡಿ’ ಚಿತ್ರದ ಕ್ಲೈಮ್ಯಾಕ್ಸ್‌ ಚಿತ್ರೀಕರಣದ ವೇಳೆ ತಿಪ್ಪಗೊಂಡನಹಳ್ಳಿ ಕೆರೆಗೆ ಹಾರಿ ಮೃತಪಟ್ಟಿದ್ದ ಇಬ್ಬರು ಖಳನಟರ ಪೈಕಿ ಉದಯ್ ಅವರ ಮೃತದೇಹ ಪತ್ತೆಯಾಗಿದೆ.

ಅನಿಲ್ ಅವರ ಮೃತದೇಹಕ್ಕಾಗಿ ತೀವ್ರ ಶೋಧ ಕಾರ್ಯ ಮುಂದುವರಿದಿದೆ. 48 ಗಂಟೆಗಳ ಬಳಿಕ ಉದಯ್ ಅವರ ಮೃತದೇಹ ಪತ್ತೆಯಾಗಿದೆ. ಈ ವೇಳೆ ಅವರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಉದಯ್ ಅವರ ಮೃತದೇಹವನ್ನು ಕೆರೆಯ ಪಕ್ಕದಲ್ಲಿಯೇ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.

ಚಿತ್ರೀಕರಣದ ವೇಳೆ ಹೆಲಿಕಾಪ್ಟರ್ ನಿಂದ ಬಿದ್ದ ಸ್ಥಳದಲ್ಲಿಯೇ ಉದಯ್ ಅವರ ಮೃತದೇಹ ಪತ್ತೆಯಾಗಿದೆ. ನವಂಬರ್ 7 ರಂದು ಮಧ್ಯಾಹ್ನ ಈ ದುರಂತ ಸಂಭವಿಸಿದ್ದು, ಮೃತದೇಹಕ್ಕಾಗಿ ಹುಡುಕಾಟ ನಡೆಯುತ್ತಲೇ ಇತ್ತು.

Comments are closed.