ಬೆಂಗಳೂರು (ನ.09): ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ಸಂದರ್ಭದಲ್ಲಿ ನದಿಗೆ ಹಾರಿದ್ದ ಖಳನಟ ಅನಿಲ್ ಹಾಗೂ ರಾಘವ್ ಉದಯ್ ದುರಂತ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ನಾಗಶೇಖರ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಳೆದ ರಾತ್ರಿ ಸುಂದರ್ ಗೌಡರನ್ನು ಬಂಧಿಸಿದ್ದ ತಾವರೆಕೆರೆ ಪೊಲೀಸರು ರಾಮನಗರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ಸುಂದರ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ.
ಘಟನೆ ಕುರಿತಂತೆ ಮಾಸ್ತಿಗುಡಿ ಚಿತ್ರ ತಂಡದ ಐವರ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಲಾಗಿತ್ತು.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ನಿರ್ಮಾಪಕ ಸುಂದರ್ ಗೌಡ, ನಿರ್ದೇಶಕ ನಾಗಶೇಖರ್, ಸಾಹಸ ನಿರ್ದೇಶಕ ರವಿವರ್ಮ, ಸಾಹಸ ಸಹ-ನಿರ್ದೇಶಕ ಭರತ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಕರ್ನಾಟಕ
Comments are closed.