ಮಂಗಳೂರು: ಒಂದು ಲೋಟ ನೀರಿಗೆ ಎರಡು ಚಮಚ ಮೆಂತೆ ಕಾಳುಗಳನ್ನು ಹಾಕಿ ರಾತ್ರಿಯಿಡಿ ನೆನೆಸಿಟ್ಟು, ಬೆಳಿಗ್ಗೆ ಇದನ್ನು ಸೋಸಿಕೊಂಡು ನೀರನ್ನು ಖಾಲಿ ಹೊಟ್ಟೆಯಲ್ಲಿ ಕುಡಿದರೆ, ಆರೋಗ್ಯ ವೃದ್ಧಿಸುವುದು. ಭಾರತೀಯ ಆಯುರ್ವೇದ ಔಷಧಿಯಲ್ಲಿ ಹಿಂದಿನಿಂದಲೂ ತನ್ನದೇ ಆದ ಸ್ಥಾನ ಪಡೆದುಕೊಂಡು ಬಂದಿರುವಂತಹ ಮೆಂತೆ ಕಾಳಿನಲ್ಲಿ ಹಲವಾರು ರೀತಿಯ ಆರೋಗ್ಯ ಗುಣಗಳು ಇವೆ. ಇದು ಕಾಯಿಲೆಗಳನ್ನು ನಿವಾರಿಸುವುದು ಮಾತ್ರವಲ್ಲದೆ ಕೆಲವೊಂದು ರೋಗಗಳು ಬರದಂತೆ ತಡೆಯುವುದು.ಕೂದಲು ಉದುರುವಿಕೆ ತಡೆಯುತ್ತೆ ಮೆಂತೆ ಹೇರ್ ಮಾಸ್ಕ್
ಹೌದು, ಮೆಂತೆ ಕಾಳು ನೆನೆಸಿದ ನೀರಿನ ಉಪಯೋಗವನ್ನು ಪಡೆದುಕೊಳ್ಳಬೇಕಾದರೆ ಈ ಲೇಖನವನ್ನು ಓದಬೇಕು. ಒಂದು ಲೋಟ ನೀರಿಗೆ ಎರಡು ಚಮಚ ಮೆಂತೆ ಕಾಳುಗಳನ್ನು ಹಾಕಿ ರಾತ್ರಿಯಿಡಿ ನೆನೆಸಿಡಬೇಕು. ಬೆಳಿಗ್ಗೆ ಇದನ್ನು ಸೋಸಿಕೊಂಡು ನೀರನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು. ವ್ಯಾಯಾಮವಿಲ್ಲದೆ ಬೊಜ್ಜು ಕರಗಿಸುವ ಮೆಂತೆ ಇದರ ಲಾಭ ಪಡೆಯಬೇಕಾದರೆ ಒಂದು ತಿಂಗಳ ಕಾಲ ಹೀಗೆ ಮುಂದುವರೆಸಿ, ಆರೋಗ್ಯ ವೃದ್ಧಿಸಿಕೊಳ್ಳಿ…. ಬನ್ನಿ ಇದರ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಿ
ತೂಕ ಕಳೆದುಕೊಳ್ಳಲು
ಮೆಂತೆ ನೆನಸಿದ ನೀರನ್ನು ಕುಡಿಯುವುದರಿಂದ ಮತ್ತು ನೆನೆಸಿದ ಮೆಂತೆಯನ್ನು ಸ್ವಲ್ಪ ತಿನ್ನುವುದರಿಂದ ಹಸಿವು ಕಡಿಮೆಯಾಗುವುದು. ಇದರಿಂದ ತೂಕ ಕಳೆದುಕೊಳ್ಳಲು ಸಹಕಾರಿ
ಜೀರ್ಣಕ್ರಿಯೆ
ಮೆಂತೆ ನೀರಿನಲ್ಲಿರುವ ಉರಿಯೂತ ಶಮನಕಾರಿ ಗುಣವು ಜೀರ್ಣಕ್ರಿಯೆಯು ಸರಾಗವಾಗಲು ನೆರವಾಗುವುದು ಮತ್ತು ಹೊಟ್ಟೆ ಉರಿಯನ್ನು ಶಮಗೊಳಿಸುವುದು
ರಕ್ತದೊತ್ತಡ ನಿಯಂತ್ರಿಸುವುದು
ಮೆಂತೆಯಲ್ಲಿ ಗ್ಲಾಕ್ಟೊಮನ್ನನ್ ಮತ್ತು ಪೊಟಾಶಿಯಂ ಇದೆ. ಇವೆರಡು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಕಾರಿ.
ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸುವುದು
ಮೆಂತೆಯು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ತೆಗೆದುಹಾಕುವುದು ಎಂದು ಹಲವಾರು ಅಧ್ಯಯನಗಳು ಹೇಳಿವೆ. ಇದರೊಂದಿಗೆ ದೇಹದಲ್ಲಿ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಇದು ಕಾಪಾಡುವುದು.
ಸಂಧಿವಾತ
ಆ್ಯಂಟಿಆಕ್ಸಿಡೆಂಟ್ ಹಾಗೂ ಉರಿಯೂತ ಶಮನಕಾರಿ ಗುಣವನ್ನು ಹೊಂದಿರುವ ಮೆಂತ್ಯೆಯು ಸಂಧಿವಾತದ ನೋವನ್ನು ನಿವಾರಿಸುವುದು.
ಕ್ಯಾನ್ಸರ್ ತಡೆಗಟ್ಟುವುದು
ಮೆಂತೆಯು ದೇಹದ ಅದರಲ್ಲೂ ಕರುಳಿನಲ್ಲಿರುವ ವಿಷಕಾರಿ ಅಂಶಗಳನ್ನು ತೆಗೆದುಹಾಕುವುದರಿಂದ ಕ್ಯಾನ್ಸರ್ ಬರದಂತೆ ತಡೆಯುವುದು
ಮಧುಮೇಹ
ಮೆಂತೆಯಲ್ಲಿ ಗ್ಲಾಕ್ಟೊಮನ್ನನ್ ಎನ್ನುವ ಪ್ರಮುಖ ನಾರಿನಾಂಶವು ರಕ್ತವು ಸಕ್ಕರೆ ಅಂಶವು ಹೀರಿಕೊಳ್ಳುವುದನ್ನು ತಗ್ಗಿಸುವುದು. ಇದರಿಂದ ಮಧುಮೇಹ ತಡೆಯಬಹುದು.
ಕಿಡ್ನಿಯ ಕಲ್ಲು
ಖಾಲಿ ಹೊಟ್ಟೆಯಲ್ಲಿ ಒಂದು ತಿಂಗಳ ಕಾಲ ಮೆಂತೆ ನೆನೆಸಿದ ನೀರನ್ನು ಕುಡಿಯಿರಿ. ಇದು ಕಿಡ್ನಿಯಲ್ಲಿ ಕಲ್ಲನ್ನು ಹೊರಹಾಕಲು ನೆರವಾಗುವುದು.
ಮಾಹಿತಿ: ಸಂಗ್ರಹ
Comments are closed.