ಕರ್ನಾಟಕ

ಯಡಿಯೂರಪ್ಪ ವಿರುದ್ಧವೂ ಎಫ್ಐಆರ್ ದಾಖಲಾಗಿತ್ತು, ಅವರು ರಾಜೀನಾಮೆ ನೀಡಿದ್ದರಾ: ಸಿದ್ದರಾಮಯ್ಯ ಪ್ರಶ್ನೆ

Pinterest LinkedIn Tumblr


ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ಅವರು ಅಧ್ಯಕ್ಷರು, ಸಂಸದರು, ಅವರ ವಿರುದ್ಧವೂ ಎಫ್ಐಆರ್ ದಾಖಲಾಗಿತ್ತು. ಅವರು ರಾಜೀನಾಮೆ ನೀಡಿದ್ದರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.

ಡಿವೈಎಸ್’ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಸಿಬಿಐ ದಾಖಲಿಸಿರುವ ಎಫ್ಐಆರ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಬಿ.ಎಸ್. ಯಡಿಯೂರಪ್ಪ ಅವರು ಅಧ್ಯಕ್ಷರು, ಸಂಸದರು, ಅವರ ವಿರುದ್ಧವೂ ಎಫ್ಐಆರ್ ದಾಖಲಾಗಿತ್ತು. ಅವರು ರಾಜೀನಾಮೆ ನೀಡಿದ್ದರಾ…? ಪ್ರಕರಣ ಸಂಬಂಧ ವಿವರ ಪಡೆದುಕೊಂಡ ಬಳಿಕ ಪ್ರತಿಕ್ರಿಯೆ ನೀಡುತ್ತೇನೆಂದು ಹೇಳಿದ್ದಾರೆ.

ನಿನ್ನೆ ಸಂಜೆ ಸಚಿವ ಜಾರ್ಜ್ ವಿರುದ್ದ ಸಿಬಿಐ ಎಫ್ಐಆರ್ ದಾಖಲಿಸಿದ ವೇಳೆ ವಿಧಾನಸೌಧದಲ್ಲಿ ಸಚಿವ ಸಂಪುಟ ಸಬೆಯಲ್ಲಿದ್ದ ಸಿಎಂ ಅವರು ಕೆಲ ಸಮಯದ ಬಳಿಕ ವಿಷಯ ತಿಳಿಯುತ್ತಿದ್ದಂತೆಯೇ ತಮ್ಮ ಕೊಠಡಿಯಲ್ಲಿಯೇ ಸಚಿವ ಜಾರ್ಜ್ ಹಾಗೂ ಸಚಿವ ಹೆಚ್.ಸಿ ಮಹದೇವಪ್ಪ ಜೊತೆಗೆ ಮಾತುಕತೆ ನಡೆಸಿದರು.

ಮಾತುಕತೆ ವೇಳೆ ಕೇಂದ್ರದಲ್ಲಿ ಹಲವಾರು ಸಚಿವರ ವಿರುದ್ದ ಎಫ್ಐಆರ್ ದಾಖಲಾಗಿದ್ದರೂ ಅನೇಕರು ರಾಜೀನಾಮೆಯನ್ನು ನೀಡಿಲ್ಲ. ಅಲ್ಲದೆ, ಎಫ್ಐಆರ್ ದಾಖಲಾದರೆ ರಾಜೀನಾಮೆ ಕೊಡಬೇಕೆಂಬ ನಿಯಮವಿಲ್ಲ. ಹೀಗಾಗಿ ಇದೊಂದು ರಾಜಕೀಯ ಕುತಂತ್ರವಾಗಿದ್ದು, ಸರ್ಕಾರ ಮತ್ತು ಪಕ್ಷ ನಿಮ್ಮೊಂದಿರುತ್ತದೆ ಎಂದು ಜಾರ್ಜ್ ಅವರಿಗೆ ಅಭಯ ನೀಡಿದ್ದಾರೆಂದು ತಿಳಿದುಬಂದಿದೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಸಿದ್ದರಾಮಯ್ಯ ಅವರು, ಸಚಿವ ಜಾರ್ಜ್ ಸೇರಿದಂತೆ ಮತ್ತಿತರರ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿರುವುದು ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ವಿವರಗಳನ್ನು ಪಡೆದುಕೊಂಡ ಬಳಿಕ ಪ್ರತಿಕ್ರಿಯೆ ನೀಡುತ್ತೇನೆಂದು ತಿಳಿಸಿದ್ದಾರೆ.

ಇದೇ ವೇಳೆ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸಲು ನಿರ್ಧರಿಸಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸುವ ಅವರು, ಯಡಿಯೂರಪ್ಪ ವಿರುದ್ಧವೂ ಎಫ್ಐಆರ್ ದಾಖಲಾಗಿತ್ತು. ಅವರೂ ಕೂಡ ಪಕ್ಷದ ಅಧ್ಯಕ್ಷರು, ಸಂಸದರು. ಅವರು ರಾಜೀನಾಮೆಯನ್ನು ಕೊಟ್ಟಿದ್ದರಾ?… ಪ್ರಕರಣವನ್ನು ಪ್ರಸ್ತುತ ಸಿಬಿಐ ತನಿಖೆ ನಡೆಸುತ್ತಿದ್ದು, ವರದಿ ಬರುವವರೆಗೂ ಕಾಯಬೇಕಿದೆ ಎಂದಿದ್ದಾರೆ.

Comments are closed.