ಬೆಂಗಳೂರು: ಬ್ಯಾಂಕುಗಳಲ್ಲಿ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಸ್ಥಳೀಯರಿಗೆ ಪ್ರಾತಿನಿಧ್ಯ ಕಲ್ಪಿಸಬೇಕು ಹಾಗೂ ಕನ್ನಡದ ಬಳಕೆಯ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕೇಂದ್ರ ಸರಕಾರವನ್ನು ಒತ್ತಾಯಿಸಿದೆ.
ಪ್ರಾಧಿಕಾರದ ಅಧ್ಯಕ್ಷ ಪ್ರೊಫೆಸರ್ ಎಸ್. ಜಿ. ಸಿದ್ದರಾಮಯ್ಯ ನೇತೃತ್ವದ ನಿಯೋಗ ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವ ಸದಾನಂದಗೌಡ ಅವರನ್ನು ಭೇಟಿಯಾಗಿ ಈ ಕುರಿತ ಮನವಿ ಸಲ್ಲಿಸಿತು.
ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿದಿಯಾಗಿರುವ ಸಲೀಂ ಅಹಮ್ಮದ್, ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಡಾ. ಸಿದ್ದಲಿಂಗಯ್ಯ, ಮುಖ್ಯಮಂತ್ರಿ ಚಂದ್ರು, ಮತಿತ್ತರರು ನಿಯೋಗದಲ್ಲಿದ್ದರು.
Comments are closed.