ಕರ್ನಾಟಕ

ಆಂಬ್ಯುಲೆನ್ಸ್‌ನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ!

Pinterest LinkedIn Tumblr


ಹೊಸಪೇಟೆ: ಮಹಿಳೆಯೊಬ್ಬರು ಆಂಬ್ಯುಲೆನ್ಸ್‌ನಲ್ಲಿ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿರುವ ಘಟನೆ ತಾಲೂಕಿನ ನಲ್ಲಾಪುರ ಗ್ರಾಮದಲ್ಲಿ ನಡೆದಿದೆ.

ನಲ್ಲಾಪುರ ಗ್ರಾಮದ ಹುಲಿಗೆಮ್ಮ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ. ಪ್ರಸವ ವೇದನೆ ಆರಂಭವಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದ ಮಾರ್ಗ ಮಧ್ಯದಲ್ಲಿಯೇ ಗರ್ಭಿಣಿ ಮಹಿಳೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.

ಅವಳಿ ಗಂಡು ಮಕ್ಕಳು ಹಾಗೂ ಮಹಿಳೆ ಆರೋಗ್ಯವಾಗಿದ್ದು, ಕಮಲಾಪುರದ ಸರಕಾರಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Comments are closed.