ಬೆಂಗಳೂರು: ನಟಿ ರಮ್ಯಾ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಮುಖ್ಯಸ್ಥರಾಗಿ ಯಶಸ್ಸು ಕಂಡ ಬಳಿಕ ರಾಜ್ಯ ಕಾಂಗ್ರೆಸ್ ವಲಯದಲ್ಲಿ ತಮ್ಮ ವರ್ಚಸ್ಸು ಹೆಚ್ಚಿಸಿಕೊಂಡಿದ್ದಾರೆ. ಹೀಗಾಗಿ ಕರ್ನಾಟಕದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಸಿಎಂ ಸಿದ್ದರಾಮಯ್ಯ ರಮ್ಯಾಗೆ ಮಹತ್ತರದ ಜವಾಬ್ಧಾರಿಯೊಂದನ್ನು ನೀಡಿದ್ದಾರೆ.
ಹೇಳಿ ಕೇಳಿ ಗ್ಲಾಮರ್ ಲೋಕದಿಂದ ಬಂದವರು ರಮ್ಯಾ. ಅವರಿಗೆ ಎಲ್ಲಾ ರಂಗದ ಸೆಲೆಬ್ರಿಟಿಗಳ ಪರಿಚಯ ಚೆನ್ನಾಗಿಯೇ ಇರುತ್ತದೆ. ಹೀಗಾಗಿಯೇ ಮುಂಬರುವ ಚುನಾವಣೆಗೆ ಸಿನಿಮಾ, ಕ್ರಿಕೆಟ್ ಸೇರಿದಂತೆ ಬೇರೆ ಕ್ಷೇತ್ರದಲ್ಲಿ ಹೆಸರು ಮಾಡಿರುವ ಖ್ಯಾತರನ್ನು ರಾಜ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ಕರೆತರುವ ಜವಾಬ್ದಾರಿಯನ್ನು ಸಿಎಂ ಸಿದ್ದರಾಮಯ್ಯ ನಟಿ ರಮ್ಯಾಗೆ ವಹಿಸಿದ್ದಾರೆ.
ಮಾಜಿ ಸಂಸದರೂ ಆಗಿರುವ ರಮ್ಯಾ ಈ ಬಾರಿ ವಿಧಾನಸಭೆ ಚುನಾವಣೆ ಆಕಾಂಕ್ಷಿ ಎಂದೇ ಹೇಳಲಾಗುತ್ತಿದೆ. ಅದೇನೇ ಇದ್ದರೂ ಈ ಚುನಾವಣೆಯಲ್ಲಿ ಅವರಿಗೆ ಮಹತ್ವದ ಜವಾಬ್ದಾರಿ ವಹಿಸಲು ನಿರ್ಧರಿಸಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿಗಿಂತ ತಮ್ಮ ಪಕ್ಷ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಹಿಂದೆ ಬೀಳದಂತೆ ತಡೆಯುವ ಜವಾಬ್ದಾರಿ ನಿಮಗೇ ಬಿಟ್ಟಿದ್ದು ಎಂದು ಸ್ಪಷ್ಟವಾಗಿ ಹೇಳಿದ್ದಾರೆ ಎನ್ನಲಾಗಿದೆ.
Comments are closed.