ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 4ರೊಳಗೆ ಮಧ್ಯ ಪ್ರವೇಶಿಸಬೇಕು ಇಲ್ಲದಿದ್ದರೆ ಅಂದು ನಡೆಯುಲಿರುವ ಬಿಜೆಪಿ ಪರಿವರ್ತನಾ ಯಾತ್ರೆ ವರೆಗೆ ಪ್ರತಿಭಟನಾ ಮೆರವಣಿಗೆ ಕೈಗೊಳ್ಳಲಾಗುವುದು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.
ಫ್ರೀಡಂ ಪಾರ್ಕ್‌ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ಈ ವಿಷಯದಲ್ಲಿ ಮೋದಿ ಮಧ್ಯ ಪ್ರವೇಶಿಸದಿದ್ದರೆ ಭಾರಿ ಪ್ರತಿಭಟನೆ ನಡೆಸಲಾಗುವುದು ಎಂದರು.
ಫೆಬ್ರವರಿ 4ರಂದು ಟೌನ್‌ಹಾಲ್‌ನಿಂದ ಒಂದು ಲಕ್ಷ ಕಾರ್ಯಕರ್ತರಿಂದ ಪ್ರಧಾನಿ ಮೋದಿ ಭಾಗವಹಿಸುವ ಬಿಜೆಪಿ ಪರಿವರ್ತನಾ ಯಾತ್ರೆವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ಪೊಲೀಸರು ನಮ್ಮನ್ನು ಹೇಗೆ ತಡೆಯುತ್ತಾರೋ ತಡೆಯಲಿ ಎಂದು ವಾಟಾಳ್ ಗುಡುಗಿದರು.
ಈ ನಡುವೆ, ಬಿಜೆಪಿ ಪರಿವರ್ತನಾ ಯಾತ್ರೆ ಕೊನೆಗೊಳ್ಳುವ ದಿನ (ಫೆ.4) ಪ್ರದಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಅಂದು ಮಹದಾಯಿ ನೀರು ಯೋಜನೆ ಜಾರಿಗೆ ಒತ್ತಾಯಿಸಿ ಕನ್ನಡಪರ ಸಂಘಟನೆ ಕಾರ್ಯಕರ್ತರು ಕಪ್ಪು ಪಟ್ಟಿ ಪ್ರದರ್ಶನ ಮಾಡಬೇಕು ಎಂದು ಕನ್ನಡಪರ ಸಂಘಟನೆಗಳು ಸ್ವಾತಂತ್ರ್ಯ ಉದ್ಯಾನದಲ್ಲಿ ನಿಲುವು ತೆಗೆದುಕೊಂಡಿವೆ.
Comments are closed.