ಬೆಂಗಳೂರು: ತೀವ್ರ ವಿರೋಧದ ನಡುವೆಯೇ ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾ.ನಾಗಮೋಹನ್ ದಾಸ್ ನೀಡಿರುವ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಗೀಕರಿಸಿದ್ದು, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ.
ಯಾವುದೇ ಕಾರಣಕ್ಕೂ ನ್ಯಾ.ನಾಗಮೋಹನ್ ದಾಸ್ ಅವರು ನೀಡಿರುವ ಪ್ರತ್ಯೇಕ ಲಿಂಗಾಯತ ಧರ್ಮದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡಬಾರದು ಎಂದು ಹುಬ್ಬಳ್ಳಿಯಲ್ಲಿ ರಂಭಾಪುರಿ ಶ್ರೀಗಳು ಪತ್ರಿಕಾಗೋಷ್ಠಿ ನಡೆಸಿ ಮನವಿ ಮಾಡಿಕೊಂಡಿದ್ದರು.
ಏತನ್ಮಧ್ಯೆ ಸೋಮವಾರ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ ಶಿಫಾರಸಿಗೆ ಸಚಿವ ಸಂಪುಟ ಸಮ್ಮತಿ ನೀಡಿರುವುದಾಗಿ ಸಚಿವ ಎಂಬಿ ಪಾಟೀಲ್ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.
-ಉದಯವಾಣಿ
Comments are closed.