ಗೋಣಿಕೊಪ್ಪಲು: ನನಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ, ಯಾವುದೇ ಕಾರಣಕ್ಕೂ ರಾಜಕೀಯಕ್ಕೆ ಬರುವುದಿಲ್ಲ, ಸಮಾಜ ಸೇವೆಗಳಲ್ಲೇ ನನ್ನನ್ನು ತೊಡಗಿಸಿಕೊಳ್ಳುತ್ತೇನೆ ಎಂದು ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ್ ಒಡೆಯರ್ ಸ್ಪಷ್ಟಪಡಿಸಿದ್ದಾರೆ.
ಕೊಡಗಿನ ಗೊಣಿಕೊಪ್ಪಲಿನಲ್ಲಿರುವ ಕಾವೇರಿ ಕಾಲೇಜು ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯದುವೀರ್ ಅವರು ಮಾರ್ಚ್. 30 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ಮೈಸೂರಿಗೆ ಆಗಮಿಸುತ್ತಿರುವ ಮತ್ತು ನಮ್ಮನ್ನು ಭೇಟಿ ಮಾಡುತ್ತಿರುವ ವಿಚಾರ ಗೊತ್ತಿಲ್ಲ. ನಾನು ಯಾವುದೇ ಪಕ್ಷದ ಪರ ಪ್ರಚಾರದಲ್ಲಿ ತೊಡಗಿಸಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.
ಅಂತರ ಕಾಯ್ದುಕೊಂಡ ಯದುವೀರ್?
ಹಲವು ಬಾರಿ ರಾಜಕೀಯಕ್ಕೆ ಬರುವುದಿಲ್ಲ ಎಂದು ಸ್ಪಷ್ಟ ಪಡಿಸಿರುವ ಯದುವೀರ್ ಒಡೆಯರ್ ಅವರು ಅಮಿತ್ ಷಾ ಭೇಟಿ ಸಂದರ್ಭದಲ್ಲಿ ಅಂತರ ಕಾಯ್ದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ಷಾ ಮೈಸೂರು ಅರಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಅವರು ಬೆಂಗಳೂರು ಪ್ರವಾಸ ಕೈಗೊಂಡಿದ್ದಾರೆ ಎಂದು ಅರಮನೆ ಮೂಲಗಳು ತಿಳಿಸಿವೆ.
Comments are closed.