ಕರ್ನಾಟಕ

ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ

Pinterest LinkedIn Tumblr

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಚಾರಕ್ಕೆ ತೆರಳಿದ ಕಡೆಯೆಲ್ಲ ಹಣ ಹಂಚುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಪಾರದರ್ಶಕವಾಗಿ ನಡೆಸುವುದು ಅನುಮಾನ ಮೂಡಿಸಿದೆ. ಮುಖ್ಯಮಂತ್ರಿಗಳ ಹಾಗೂ ಅವರ ಆಪ್ತ ಸಚಿವರು ಹಣ ಹಂಚಿ ಗೆಲ್ಲುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್ ದೂರಿನಲ್ಲಿ ತಿಳಿಸಿದ್ದಾರೆ.

ಇದಕ್ಕೂ ಮುನ್ನ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಕೊಲೆಯಾಗಿದ್ದ ಆರ್ಎಸ್ಎಸ್ ಕಾರ್ಯಕರ್ತ ರಾಜು ಕುಟುಂಬಕ್ಕೆ 5 ಲಕ್ಷ ರು. ಚೆಕ್ ವಿತರಿಸುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿತ್ತು.

Comments are closed.