ಮೈಸೂರು: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಕೆಲವರ ಮೇಲೆ ಆರೋಪವಿದೆ, ಹೀಗಾಗಿ ಸಮಾಜ ಒಪ್ಪುವವರಿಗೆ ಮಾತ್ರ ಬಿಜೆಪಿ ಟಿಕೆಟ್ ಕೊಡಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.
ಶನಿವಾರ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಡವರ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಕೆಲಸ ಮಾಡುತ್ತಿದೆ ಎಂದರು.
ಓಬಿಸಿ ಕಲ್ಯಾಣಕ್ಕೆ ಸಾಕಷ್ಟು ಕೆಲಸ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಆದರೆ ಕಾಂಗ್ರೆಸ್ ಗೆ ಯಾಕೆ ಓಬಿಸಿ ಮಹತ್ವದ ಬಗ್ಗೆ ಸಿಎಂ ತಿಳಿಸಿಕೊಟ್ಟಿಲ್ಲ. ಸಂಸತ್ತಿನಲ್ಲಿ ಮಸೂದೆ ಮಂಡನೆಗೆ ಯಾಕೆ ಕಾಂಗ್ರೆಸ್ ಅಡ್ಡಿಪಡಿಸುತ್ತಿದೆ ಎಂದು ಪ್ರಶ್ನಿಸಿದರು. ತಳವಾರ, ಪರಿವಾರ ಸಮುದಾಯವನ್ನು ಎಸ್ ಟಿಗೆ ಸೇರಿಸಿದ್ದು ಕೇಂದ್ರ ಸರ್ಕಾರ ಎಂದು ಹೇಳಿದರು.
-ಉದಯವಾಣಿ
Comments are closed.