ಕರ್ನಾಟಕ

ಸೀರೆಗಳ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

Pinterest LinkedIn Tumblr


ಚಿಕ್ಕಮಗಳೂರು : ಪೊಲೀಸ್ ಹಾಗೂ ಚುನಾವಣಾ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಐವತ್ತು ಸಾವಿರಕ್ಕೂ ಅಧಿಕ ಸೀರೆಗಳನ್ನು ವಶಪಡಿಸಿಕೊಂಡಿದ್ದಾರೆ.

ಚಿಕ್ಕಮಗಳೂರಿನ ಕೌಂತ್ಯ ಹೋಟೇಲ್ ಹಿಂಭಾಗ ಹತ್ತು ವೀಲ್ ಲಾರಿಯಲ್ಲಿ ಬಂದಿದ್ದ ಸೀರೆಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಬಿಜೆಪಿ ಪಕ್ಷಕ್ಕೆ ಸೇರಿದ ಸೀರೆಗಳು ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಅಧಿಕಾರಿಗಳು ಸೀರೆಗಳನ್ನು ಲೆಕ್ಕ ಹಾಕುತ್ತಿದ್ದಾರೆ.

Comments are closed.