ಕರ್ನಾಟಕ

ಮೋದಿ ಆಗಮನಕ್ಕೆ ನಮ್ಮ ವಿರೋಧವಿಲ್ಲ… ವೈಯುಕ್ತಿಕವಾಗಿ ನಮ್ಮ ನಡುವೆ ದ್ವೇಷವಿಲ್ಲ: ಸಿಎಂ ಸಿದ್ದರಾಮಯ್ಯ

Pinterest LinkedIn Tumblr

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರ ಕರ್ನಾಟಕಕ್ಕೆ ಆಗಮಿಸುವ ಕುರಿತು ನಮಗೆ ವಿರೋಧವಿಲ್ಲ. ವೈಯುಕ್ತಿಕವಾಗಿ ನಮ್ಮ ನಡುವೆ ಯಾವುಗೇ ದ್ವೇಷವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಮಂಗಳವಾರದಿಂದ ರಾಜ್ಯದಲ್ಲಿ ಬಿಜೆಪಿ ಪರ ಪ್ರಚಾರ ನಡೆಸಲು ಮೈಸೂರಿಗೆ ಪ್ರಧಾನಿ ಮೋದಿ ಅವರ ಆಗಮನ ಹಿನ್ನಲೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಇದು ಪ್ರಜಾ ಪ್ರಭುತ್ವ. ಪ್ರಧಾನಿ ಮೋದಿ ಅವರೊಂದಿಗೆ ನಮ್ಮ ವೈಯುಕ್ತಿ ದ್ವೇಷವೇನೂ ಇಲ್ಲ, ಅವರು ಕರ್ನಾಟಕಕ್ಕೆ ಆಗಮಿಸುವ ಕುರಿತು ನಮಗೆ ವಿರೋಧವಿಲ್ಲ. ಆದರೆ ಪ್ರಧಾನಿ ಮೋದಿ ಆಗಮಿಸಿದ ಮಾತ್ರಕ್ಕೆ ಕರ್ನಾಟಕದಲ್ಲಿ ಬಿಜೆಪಿ ಭವಿಷ್ಯವೇನೂ ಬದಲಾಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದೇ ವೇಳೆ ಬಿಜೆಪಿ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಗೆ ಭ್ರಷ್ಟಾಚಾರದ ಕುರಿತು ಮಾತನಾಡುವ ನೈತಿಕತೆಯೇ ಇಲ್ಲ. ಭ್ರಷ್ಟಾಚಾರದ ವಿರುದ್ಧ ಮಾತನಾಡಿದ್ದ ಬಿಜೆಪಿ, ಲೋಕಪಾಲರನ್ನು ನೇಮಕ ಮಾಡಿತೇ..ಪ್ರಧಾನಿ ಮೋದಿ ಗುಜರಾತ್ ಸಿಎಂ ಆಗಿದ್ದಾಗ ಲೋಕಾಯುಕ್ತರನ್ನೇ ನೇಮಕ ಮಾಡಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Comments are closed.